More

    12 ಜನರಲ್ಲಿ ಮತ್ತೆ ಕರೊನಾ ಪತ್ತೆ

    ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 12 ಜನರಿಗೆ ಕರೊನಾ ಸೋಂಕು ದೃಢವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ 51 ಜನರಿಗೆ ಸೋಂಕು ಅಪ್ಪಳಿಸಿದ ಬೆನ್ನಲ್ಲೇ ಬುಧವಾರ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಎಲ್ಲ ಸೋಂಕಿತರು ಬೆಳಗಾವಿ ತಾಲೂಕಿನವರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ
    ಸಂಖ್ಯೆ 216ಕ್ಕೆ ಏರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

    ಗೊಂದಲ ತಂದ ವರದಿ: ಬುಧವಾರ ರಾಜ್ಯ ಹೆಲ್ತ್ ಬುಲೆಟಿನ್‌ನಲ್ಲಿ ಸರ್ಕಾರ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ದೃಢವಾಗಿಲ್ಲ ಎಂದು ತಿಳಿಸಿದೆ. ಆದರೆ, ಜಿಲ್ಲಾಡಳಿತ ನೀಡಿದ ಬುಲೆಟಿನ್‌ನಲ್ಲಿ 12 ಜನರಿಗೆ ಸೋಂಕು ತಗುಲಿದ್ದಾಗಿ ದೃಢಪಡಿಸಿದ್ದು, ಗೊಂದಲಕ್ಕೆ ಕಾರಣವಾಗಿದೆ.

    2 ಸಾವಿರ ವರದಿ ಬಾಕಿ: ಜಿಲ್ಲೆಯಲ್ಲಿ ಇನ್ನೂ 2 ಸಾವಿರ ಕರೊನಾ ಶಂಕಿತರ ಗಂಟಲು ದ್ರವದ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಕರೊನಾ ವೈರಸ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 14,516 ಜನರ ಮೇಲೆ ನಿಗಾ ಇಡಲಾಗಿದ್ದು, 5,600 ಜನರನ್ನು 14 ದಿನ ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. 97 ಜನರನ್ನು ಐಸೋಲೇಟೆಡ್ ವಾರ್ಡ್‌ನಲ್ಲಿ ಇರಿಸಲಾಗಿದೆ. 1,974 ಜನ 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. 6,845 ಮಂದಿ 28 ದಿನಗಳ ಕ್ವಾರಂಟೈನ್ ಮುಗಿಸಿದ್ದಾರೆ. 13,220 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. 10,817 ಮಾದರಿಗಳು ನೆಗೆಟಿವ್ ಬಂದಿವೆ. ಜಿಲ್ಲೆಯ 126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಕಂಟೇನ್ಮೆಂಟ್ ಜೋನ್ ಹೆಚ್ಚಿಸಿ ಬಿಗಿ ಕ್ರಮ: ಕರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಜೋನ್‌ಗಳ ಸಂಖ್ಯೆ ಹೆಚ್ಚಿಸಲಾಗಿದ್ದು, ಇದು ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ಈ ಕಂಟೇನ್ಮೆಂಟ್ ವಲಯಗಳಲ್ಲಿ ಸಾರ್ವಜನಿಕರ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಈ ಪ್ರದೇಶಗಳಿಂದ ಹೊರ ಹಾಗೂ ಒಳ ಪ್ರವೇಶ ನಿಷೇಧಿಸಲಾಗಿದೆ.

    ಜಿಲ್ಲೆಯಲ್ಲಿ 13 ಕಂಟೇನ್ಮೆಂಟ್ ಜೋನ್‌ಗಳಿವೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಸದಾಶಿವ ನಗರ, ಮಳೆನಟ್ಟಿ, ಕಂಗ್ರಾಳಿ ಕೆ.ಎಚ್., ಅಗಸಗಾ, ರಾಯಬಾಗ ತಾಲೂಕಿನ ಕುಡಚಿ, ಕುಡಚಿ ಗ್ರಾಮೀಣ, ರಾಮದುರ್ಗ ತಾಲೂಕಿನ ಕಲ್ಲೂರ, ಚಿಕ್ಕೋಡಿ ಪಟ್ಟಣ ಮತ್ತು ಚಿಕ್ಕೋಡಿ ತಾಲೂಕಿನ ಹಿರೇಕೂಡಿ, ನನದಿವಾಡಿ, ಹುಕ್ಕೇರಿ ತಾಲೂಕಿನ ದೊಂಡಗಟ್ಟಿ, ದಡ್ಡಿ ಗ್ರಾಮವನ್ನು ಕಂಟೇನ್ಮೆಂಟ್ ವಲಯ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ 9 ಕಂಟೇನ್ಮೆಂಟ್ ಜೋನ್‌ಗಳನ್ನು ಡಿನೋಟಿಫೈ ಮಾಡಿ ಮುಕ್ತಗೊಳಿಸಲಾಗಿತ್ತು. ಈಗ ಮತ್ತೆ ಕಂಟೇನ್ಮೆಂಟ್ ಜೋನ್‌ಗಳ ಸಂಖ್ಯೆಗಳಲ್ಲಿ ಹೆಚ್ಚಳವಾಗಿವೆ. ಇದರಿಂದ ಜಿಲ್ಲೆಯ ಜನರು ಭಯಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts