ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಆಕ್ರೋಶ

blank

ಮೂಡಿಗೆರೆ: ಸರ್ಕಾರಿ ನೌಕರರ ಚುನಾವಣೆಗೆ ಆರೋಗ್ಯ ಇಲಾಖೆಯ 14 ಮಂದಿಯನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದ್ದು, ಇದನ್ನು ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆ ನೌಕರರು ಚುನಾವಣಾಧಿಕಾರಿ ರಮೇಶ್ ಹಾಗೂ ತಹಸೀಲ್ದಾರ್ ರಾಜಶೇಖರ್ ಮೂರ್ತಿಗೆ ಮನವಿ ಸಲ್ಲಿಸಿದರು.
ಆರೋಗ್ಯ ಇಲಾಖೆಯ 3 ಕ್ಷೇತ್ರದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳನ್ನು ಒಂದೇ ಮತ ಪತ್ರದಲ್ಲಿ ಅಭ್ಯರ್ಥಿಗಳ ಹೆಸರನ್ನು ಸೇರಿಸಲಾಗಿತ್ತು. ಅದನ್ನು ಈಗ ಸರಿಪಡಿಸಲಾಗಿದೆ. ಆದರೆ ಆರೋಗ್ಯ ಇಲಾಖೆಯ ಡಾ.ರೂಪಾ, ಡಾ.ಗೌತಮ್, ಡಾ.ವಿರೂಪಾಕ್ಷ, ಡಾ.ಉಮೇಶ್‌ಭಟ್, ಹೇಮಾ, ನಳಿನಾಕ್ಷಿ ಸೇರಿದಂತೆ 14 ಮಂದಿ ನೌಕರರನ್ನು ಮತದಾರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಆರೋಪಿಸಿದರು.
ಹಿಂದಿನ ಅಧ್ಯಕ್ಷರು ಮತದಾರ ಪಟ್ಟಿ ತಯಾರಿಸುವಾಗ, ನಮ್ಮ ಇಲಾಖೆಯಲ್ಲಿರುವ ನೌಕರರ ಬಗ್ಗೆ ಮಾಹಿತಿ ಪಡೆದಿಲ್ಲ. ನಿಯಮದ ಪ್ರಕಾರದ ಚುನಾವಣೆ ಪ್ರಕ್ರಿಯೆ ನಡೆಯುವ 26 ದಿನದ ಹಿಂದೆಯೇ ಮತದಾರ ಪಟ್ಟಿ ನೋಟಿಸ್ ಬೋರ್ಡ್‌ನಲ್ಲಿ ಹಾಕಿಲ್ಲ. ಈ ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ಕೆಲ ಲೋಪ ವಿರೋಧಿಸಿದ್ದರಿಂದ ನಮ್ಮನ್ನು ಸೋಲಿಸಲು ತಂತ್ರ ರೂಪಿಸಲಾಗಿದೆ. ಈಗೆ ಸಮಸ್ಯೆ ಬಗೆಹರಿಸುತ್ತೇವೆಂದು ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಲ್ಬುರ್ಗಿಯಲ್ಲಿ ಇದೇ ಸಮಸ್ಯೆ ಉಂಟಾಗಿದ್ದು, ಕೈಬಿಟ್ಟವರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಹೈಕೋರ್ಟ್ ಆದೇಶ ಮಾಡಿದೆ. ಹಾಗಾಗಿ ಇಲ್ಲಿಯೂ ಕೂಡ ಕೈ ಬಿಟ್ಟವರಿಗೆ ಮತದಾನದ ಹಕ್ಕು ನೀಡಬೇಕು ಎಂದು ಒತ್ತಾಯಿಸಿದರು.

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…