More

    ತುಪ್ಪರಿಹಳ್ಳದ ಅನುದಾನ ತಡೆಗೆ ಆಕ್ರೋಶ

    ನವಲಗುಂದ: ಈಗಾಗಲೇ ತುಪ್ಪರಿಹಳ್ಳ ನೆರೆ ಸಂರಕ್ಷಣೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮೋದನೆ ಪಡೆದುಕೊಂಡು 1.50 ಕೋಟಿ ರೂ. ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಲಾಗಿದೆ. ಇನ್ನುಳಿದ 1.50 ಕೋಟಿ ರೂ.ಅನುದಾನವನ್ನು ಕಾಂಗ್ರೆಸ್ ಸರ್ಕಾರ ತಡೆ ಹಿಡಿದು, ಈ ಭಾಗದ ರೈತರ ಕೆಂಗೆಣ್ಣಿಗೆ ಗುರಿಯಾಗಲಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಆಕ್ರೋಶ ವ್ಯಕ್ತ ಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು 90 ಕಿಮೀ ಹರಿಯುವ ತುಪ್ಪರಿ ಹಳ್ಳದದಿಂದ ಆಗುವ ನೆರೆಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಟೆಂಡರ್ ಕರೆದು ಕಾಮಗಾರಿ ನೀಡಲಾಗಿದೆ. ಅಲ್ಲದೆ, ಪಟ್ಟಣ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಸುಮಾರು 48 ಕೋಟಿ ರೂ. ಅನುಮೋದನೆಯನ್ನು ನೀಡಲಾಗಿದೆ. ಆದರೆ, ರಾಜ್ಯ ಸರ್ಕಾರ ಈ ಎರಡು ಕಾಮಗಾರಿಗಳಿಗೆ ಬ್ರೇಕ್ ಹಾಕಿದೆ. ಹೀಗಾಗಿ, ಕೂಡಲೇ ಎಚ್ಚುತ್ತುಕೊಂಡು ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

    ತುಪ್ಪರಿ ಹಳ್ಳದ ಯೋಜನೆಯಲ್ಲಿ ಶಿರಕೋಳ, ಗುಮ್ಮಗೋಳ ಗ್ರಾಮಗಳಿಗೆ ಅತಿ ಹೆಚ್ಚು ಹಾನಿಯಾಗಲಿದ್ದು, ಇಂತಹ ಪ್ರದೇಶಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸಲಾಗಿದ್ದು, ಯೋಜನಾ ವರದಿ ಪ್ರಕಾರ ಪಾರದರ್ಶಕವಾಗಿ ಕಾಮಗಾರಿ ಮಾಡಲು ಶಾಶ್ವತ ಪರಿಹಾರ ಕಂಡುಕೊಳ್ಳವ ದೃಷ್ಟಿಕೋನ ಹೊಂದಿದ್ದು, ನೀರಾವರಿ ಇಲಾಖೆಯಿಂದ 1.5 ಟಿಎಂಸಿ ನೀರಿನ ಅಲೋಕೇಷನ್ ಪಡೆದುಕೊಳ್ಳಲಾಗಿದೆ. ಈ ಯೋಜನೆಯಿಂದ ಈ ಭಾದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ ಎಂದು ಸ್ಪಷ್ಟಪಡಿಸಿದರು.

    ಕಾಂಗ್ರೆಸ್ ಸೇರ್ಪಡೆ ಕೇವಲ ಉಹಾಪೋಹ

    ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ಊಹಾಪೋಹವಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಾಗಲಿ ಅಥವಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಾಗಲಿ, ನನಗೆ ಕಾಂಗ್ರೆಸ್‌ಗೆ ಬನ್ನಿ ಎಂದು ಕರೆ ಮಾಡಿಲ್ಲ. ಬಿಜೆಪಿಯಲ್ಲಿದ್ದುಕೊಂಡೇ ಪಕ್ಷ ಸಂಘಟನೆ ಮಾಡುತ್ತೇನೆ ಎಮದು ಮುನೇನಕೊಪ್ಪ ಸ್ಪಷ್ಟಪಡಿಸಿದರು.
    ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬೇರೆ ಕ್ಷೇತ್ರದಿಂದ ಲೋಕಭೆಗೆ ಚುನಾವಣೆಗೆ ಸ್ಪರ್ಧಿಸುತ್ತಾರೆಂದು ಹೇಳಲಾಗುತ್ತಿದೆ. ಹೀಗಾಗಿ, ನೀವು ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಂಸದ ಸ್ಥಾನಕ್ಕೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಅಲ್ಲದೆ, ಈ ಕ್ಷೇತ್ರದ ಸಂಸದರಾಗಿರುವ ಜೋಶಿ ಅವರು ಈ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts