More

    ಮೂಲಸೌಕರ್ಯ ಒದಗಿಸದ್ದಕ್ಕೆ ಆಕ್ರೋಶ

    ಭಟ್ಕಳ: ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಭಟ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಶಾಮಿಯಾನ, ಮೂಲಸೌಕರ್ಯ ಕಲ್ಪಿಸದೇ ಇರುವುದನ್ನು ಕಂಡು ಮಕ್ಕಳ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.

    ಭಟ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಒಟ್ಟು 26 ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಈ ಕ್ರೀಡಾಕೂಟದ ಉಸ್ತುವಾರಿಯನ್ನು ನವಾಯತ್ ಕಾಲನಿಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ವಹಿಸಿಕೊಂಡಿದೆ. ಆದರೆ, ಕ್ರೀಡಾಕೂಟದಲ್ಲಿ ಕ್ರೀಡಾಳುಗಳಿಗೆ ಸರಿಯಾದ ಮೂಲಸೌಕರ್ಯ ಕಲ್ಪಿಸದೆ ಇರುವುದು ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ.

    ತಾಲೂಕು ಕ್ರೀಡಾಂಗಣದ ಸಮೀಪ ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಸಲಾಗಿದೆ. ಧ್ವನಿವರ್ಧಕ ಸೇರಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಇಲ್ಲೇ ಕಲ್ಪಿಸಿದ್ದಾರೆ. ಆದರೆ, ಶಾಲೆ ಹಾಗೂ ಕ್ರೀಡಾಂಗಣಕ್ಕೆ 200 ಮೀಟರ್ ದೂರವಿದ್ದು, ಮಕ್ಕಳಿಗೆ ಕುಳಿತುಕೊಳ್ಳಲು ಯಾವುದೇ ರೀತಿ ಶಾಮಿಯಾನದ ವ್ಯವಸ್ಥೆ ಮಾಡಿಲ್ಲ. ಇದರಿಂದ ಓರ್ವ ಕ್ರೀಡಾಪಟು ಆಟದ ವೇಳೆ ತಲೆಸುತ್ತಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts