21.7 C
Bengaluru
Tuesday, January 21, 2020

ಹೊರಗುತ್ತಿಗೆಗೆ ಕಡಿವಾಣ?

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಘನತ್ಯಾಜ್ಯ ನಿರ್ವಹಣೆಗೆ ಪಾಲಿಕೆಯಿಂದ ಡಿಪಿಆರ್ ತಯಾರಿಕೆ

ಬೆಳಗಾವಿ: ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸಮಗ್ರವಾಗಿ ಘನತ್ಯಾಜ್ಯ ನಿರ್ವಹಣೆ ಮಾಡಲು ಮಹಾನಗರ ಪಾಲಿಕೆಯು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದೆ. ತನ್ಮೂಲಕ ಈಗಿರುವ ಕಸ ವಿಲೇವಾರಿ ಹೊರಗುತ್ತಿಗೆ ತಪ್ಪಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

41 ಕೋಟಿ ರೂ. ವೆಚ್ಚದ ಡಿಪಿಆರ್ ತಯಾರಿಸಲಾಗಿದ್ದು, ಪಾಲಿಕೆ ಆಡಳಿತಾಧಿಕಾರಿ ಅವರ ಪರಿಶೀಲನೆಯಲ್ಲಿದೆ. ಬಳಿಕ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯಕ್ಕೆ ವರದಿ ಸಲ್ಲಿಕೆಯಾಗಲಿದೆ. ಪಾಲಿಕೆ ಪ್ರಸ್ತಾವನೆಗೆ ಪೌರಾಡಳಿತ ನಿರ್ದೇಶನಾಲಯದಿಂದ ಒಪ್ಪಿಗೆ ಸಿಕ್ಕರೆ, ಹೊರಗುತ್ತಿಗೆ ಆಧಾರದಲ್ಲಿ ನಡೆಯುತ್ತಿರುವ ಕಸ ವಿಲೇವಾರಿಗೆ ಬ್ರೇಕ್ ಬೀಳಲಿದೆ.

ಡಿಪಿಆರ್‌ನಲ್ಲಿ ಏನಿದೆ?: ಡಿಪಿಆರ್‌ನಲ್ಲಿ ವಾಹನ ಮತ್ತು ಯಂತ್ರ ಖರೀದಿಗೆ 16 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಸಿವಿಲ್ ಕಾಮಗಾರಿಗಳಿಗೆ 25 ಕೋಟಿ ರೂ. ಹಾಗೂ ಜಿ.ಪಿ.ಎಸ್, ಮೈಕ್ ಇತ್ಯಾದಿಗೆ 21 ಲಕ್ಷ ರೂ. ಮೀಸಲಿಡಲಾಗಿದೆ. ಘನತ್ಯಾಜ್ಯ ವಿಲೇವಾರಿಗೆ 114 ಮಿನಿ ಟಿಪ್ಪರ್, 3 ಟಿಪ್ಪರ್, 2 ಬ್ಯಾಕ್ ಹೋ ಲೋಡರ್ (ಜೆಸಿಬಿ), 9 ಕಾಂಪ್ಯಾಕ್ಟರ್ ಯಂತ್ರ, ಸಿಎನ್‌ಡಿ ವೇಸ್ಟ್ ನಿರ್ವಹಣೆಗೆ 2 ಟಿಪ್ಪರ್ ಖರೀದಿಸುವ ಯೋಜನೆ ಹೊಂದಲಾಗಿದೆ. ಡಿಪಿಆರ್‌ಗೆ ಒಪ್ಪಿಗೆ ದೊರೆತ ಬಳಿಕ ಸರ್ಕಾರ ಹುದ್ದೆ ಮತ್ತು ನೇಮಕಾತಿ ನಿಯಮದ ಅನ್ವಯ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಿದೆ.

ಹೊರಗುತ್ತಿಗೆ 20 ಕೋಟಿ ರೂಪಾಯಿ: ಘನತ್ಯಾಜ್ಯ ನಿರ್ವಹಣೆಗೆ ಪಾಲಿಕೆ ಪ್ರತಿವರ್ಷ 20 ಕೋಟಿ ರೂಪಾಯಿ ಹೊರಗುತ್ತಿಗೆ ನೀಡುತ್ತಿದೆ. 1996ರಿಂದ ಇದೇ ಪ್ರಕ್ರಿಯೆ ನಡೆದು ಬಂದಿದೆ. ಪಾಲಿಕೆ ನೀಡುವ 20 ಕೋಟಿ ರೂ. ಹಣದಲ್ಲಿ ಹೊರಗುತ್ತಿಗೆ ಆಧಾರದಲ್ಲಿರುವ ಪ್ರತಿ ಪೌರಕಾರ್ಮಿಕರಿಗೆ ಸುಮಾರು 14 ಸಾವಿರ ರೂ. ಸಂಭಾವನೆ ಸಂದಾಯವಾಗುತ್ತಿದೆ. ಎರಡು ದಶಕಗಳ ಬಳಿಕ ಮಹಾನಗರ ಪಾಲಿಕೆ ಘನತ್ಯಾಜ್ಯ ವಿಲೇವಾರಿಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳುವ ನಿರ್ಧಾರ ಮಾಡಿದೆ.

ಭರಪೂರ ಅನುದಾನ: ಸಮಗ್ರ ಘನತ್ಯಾಜ್ಯ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದಿಂದ 14.56 ಕೋಟಿ ರೂಪಾಯಿ, ರಾಜ್ಯ ಸರ್ಕಾರದಿಂದ 9.71 ಕೋಟಿ ರೂಪಾಯಿ ಹಾಗೂ ನಗರ ಸ್ಥಳೀಯ ಸಂಸ್ಥೆಯಿಂದ 17.35 ಕೋಟಿ ರೂಪಾಯಿ ಅನುದಾನ ಬರಲಿದೆ.

ತುರಮರಿ ತ್ಯಾಜ್ಯ ಘಟಕಕ್ಕೆ ಡಂಪ್: ಹೊರಗುತ್ತಿಗೆ ಪಡೆದವರು ಮಹಾನಗರದಲ್ಲಿ ಪ್ರತಿದಿನ 250ರಿಂದ 260  ಟನ್‌ನಷ್ಟು ಕಸ ಸಂಗ್ರಹಿಸಿ, ಬೆಳಗಾವಿ ತಾಲೂಕಿನ ತುರಮರಿ ತ್ಯಾಜ್ಯ ಘಟಕಕ್ಕೆ ಡಂಪ್ ಮಾಡುತ್ತಿದ್ದಾರೆ. ಪಾಲಿಕೆಯ ನಿರ್ದೇಶನ, ನಿರೀಕ್ಷೆಯಂತೆ ಹೊರಗುತ್ತಿಗೆದಾರರು ಕೆಲಸ ನಿರ್ವಹಿಸುತ್ತಿದ್ದಾರೆ. 3-4 ತಿಂಗಳಿಗೊಮ್ಮೆ ಹೊರಗುತ್ತಿಗೆ ಪೌರಕಾರ್ಮಿಕರಿಗೆ ಪಾಲಿಕೆಯಿಂದ ತರಬೇತಿ ಆಯೋಜಿಸಲಾಗಿರುತ್ತದೆ. ಆದರೆ, ಕಸ ವಿಂಗಡಣೆ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎನ್ನುತ್ತಾರೆ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು.

41 ಕೋಟಿ ರೂ. ವೆಚ್ಚದಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಿದ್ದೇವೆ. 6 ತಿಂಗಳಲ್ಲಿ ಯೋಜನೆ ಅನುಷ್ಠಾನವಾಗಬಹುದು ಎಂಬ ನಿರೀಕ್ಷೆಯಿದೆ. ಯೋಜನೆ ಅನುಷ್ಠಾನವಾದ ಬಳಿಕ ನಿಯಮದಂತೆ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.
| ರಾಜಶೇಖರ ಚಿತ್ತವಾಡಗಿ ಪಾಲಿಕೆಯ ಪರಿಸರ ಕಾರ್ಯಕಾರಿ ಸಹಾಯಕ ಅಭಿಯಂತ

| ಜಗದೀಶ ಹೊಂಬಳಿ ಬೆಳಗಾವಿ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...