More

    ಬಾಕಿ ವೇತನ ಪಾವತಿಗೆ ಆಗ್ರಹ: ಹಡಗಲಿಯಲ್ಲಿ ಸರ್ಕಾರಿ ಹಾಸ್ಟೆಲ್ ಗುತ್ತಿಗೆ ನೌಕರರ ಪ್ರತಿಭಟನೆ

    ಹೂವಿನಹಡಗಲಿ: ಬಾಕಿ ವೇತನ ಪಾವತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರು ಶುಕ್ರವಾರ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ಎಐಟಿಯುಸಿ ಮುಖಂಡ ಶಾಂತರಾಜ್ ಜೈನ್ ಮಾತನಾಡಿ, ಕೋವಿಡ್ ಕಾರಣಕ್ಕೆ ಮಾರ್ಚ್‌ನಿಂದ ಈವರೆಗೆ ಹೊರಗುತ್ತಿಗೆ ನೌಕರರಿಗೆ ವೇತನ ನೀಡಿಲ್ಲ. ಇದರಿಂದ ನೌಕರರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೂಡಲೇ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಎಲ್ಲ ಇಲಾಖೆಯ ಸರ್ಕಾರಿ ಹಾಸ್ಟೆಲ್‌ಗಳಿಗೆ ರಾತ್ರಿ ಕಾವಲುಗಾರರನ್ನು ನೇಮಿಸಬೇಕು. ಹೊರಗುತ್ತಿಗೆ ನೌಕರರಿಗೆ 60 ವರ್ಷಗಳವರೆಗೆ ಸೇವಾ ಭದ್ರತೆ ನೀಡಬೇಕು. ಕೋವಿಡ್ ವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

    ಬಳಿಕ ಗ್ರೇಡ್ 2 ತಹಸೀಲ್ದಾರ್ ಪ್ರಭಾಕರಗೌಡಗೆ ಮನವಿ ಸಲ್ಲಿಸಲಾಯಿತು. ನೌಕರರ ಸಂಘದ ತಾಲೂಕು ಅಧ್ಯಕ್ಷ ಪಕ್ಕೀರಸ್ವಾಮಿ, ಎವೈಎಫ್ ಸಂಘದ ಮುಖಂಡ ಬಸವರಾಜ ಸಂಶಿ, ಮುಖಂಡರಾದ ಹಲಗಿ ಸುರೇಶ, ಪರಶುರಾಮಪ್ಪ, ವಿಜಯಲಕ್ಷ್ಮೀ, ದಾದಾ ಖಲಂದರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts