More

    ನಾಳೆ 6ನೇ ಹಂತದ ಮತದಾನಕ್ಕೆ 58 ಲೋಕಸಭಾ ಕ್ಷೇತ್ರಗಳ 11 ಕೋಟಿ ಮತದಾರರು ತುದಿಗಾಲಲ್ಲಿ!

    ನವದೆಹಲಿ: ದೇಶದ 58 ಸ್ಥಾನಗಳಿಗೆ ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನ ನಾಳೆ ( ಶನಿವಾರ ) ನಡೆಯಲಿದ್ದು 11 ಕೋಟಿಗೂ ಹೆಚ್ಚು ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಕಣದಲ್ಲಿ 889 ಅಭ್ಯರ್ಥಿಗಳಿದ್ದಾರೆ.

    ಇದನ್ನೂ ಓದಿ: ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್​ಗೆ 4 ದಿನಗಳ ನ್ಯಾಯಾಂಗ ಬಂಧನ

    ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರಕ್ಕೂ ಶನಿವಾರ ಮತದಾನ ನಡೆಯಲಿದೆ. ಪ್ರತಿಕೂಲ ಹವಾಮಾನದ ಕಾರಣ ವ್ಯವಸ್ಥಾಪನಾ ಸಮಸ್ಯೆಗಳಿಂದಾಗಿ ಅಲ್ಲಿನ ಚುನಾವಣೆಯನ್ನು ಮೂರರಿಂದ ಆರನೇ ಹಂತಕ್ಕೆ ಮುಂದೂಡಲಾಗಿತ್ತು. 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು ಮತ್ತು 5,120 ತೃತೀಯಲಿಂಗಿ ಮತದಾರರು ಸೇರಿದಂತೆ 11.13 ಕೋಟಿ ಜನರು ಆರನೇ ಹಂತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

    ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೀಮಲ್​ ಚಂಡಮಾರುತದಿಂದ ವಾತಾವರಣದಲ್ಲಿ ಬದಲಾವಣೆ ಉಂಟಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮಾಹಿತಿ ನೀಡಿದ್ದು ಮತದಾನ ನಡೆಯುವ ಪ್ರದೇಶಗಳಲ್ಲಿ ವೈಪರೀತ್ಯದ ಅಪಾಯಗಳಿಲ್ಲ ಎಂದು ತಿಳಿಸಿದೆ.

    ಒಡಿಶಾದ ಕೆಲವು ಲೋಕಸಭೆ ಮತ್ತು ವಿಧಾನಸಭೆ ಸ್ಥಾನಗಳ ಜೊತೆಗೆ ಪಶ್ಚಿಮ ಬಂಗಾಳದ ಕೆಲವು ಲೋಕಸಭಾ ಕ್ಷೇತ್ರಗಳಿಗೂ ಆರನೇ ಹಂತದಲ್ಲಿ ಶನಿವಾರ ಮತದಾನ ನಡೆಯಲಿದೆ. ದೆಹಲಿ, ಗುರುಗ್ರಾಮ್ ಮತ್ತು ಫರಿದಾಬಾದ್ ಸೇರಿದಂತೆ ನಗರ ಕೇಂದ್ರಗಳಲ್ಲಿ ಶನಿವಾರ ಮತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಮೂಲಕ ನಗರ ನಿರಾಸಕ್ತಿ ಪ್ರವೃತ್ತಿಯನ್ನು ಮುರಿಯುವಂತೆ ಚುನಾವಣಾ ಆಯೋಗವು ಮತದಾರರನ್ನು ಒತ್ತಾಯಿಸಿದೆ.

    ಉಳಿದ 57 ಸ್ಥಾನಗಳಿಗೆ ಜೂನ್ 1 ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಮೊದಲ ಐದು ಹಂತದ ಚುನಾವಣೆಗಳಲ್ಲಿ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು 428 ಸ್ಥಾನಗಳಿಗೆ ಮತದಾನ ಪೂರ್ಣಗೊಂಡಿದೆ.

    ಹುಟ್ಟುವ ಮಗುವಿನ ಲಿಂಗ ತಿಳಿಯಲು ಹೆಂಡತಿಯ ಹೊಟ್ಟೆಯನ್ನೇ ಸೀಳಿದ ಪಾಪಿಗಂಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts