More

    ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 6.83 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ: ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸಿಬ್ಬಂದಿ ಸಚಿವಾಲಯ

    ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 6.83 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಬುಧವಾರ ಲೋಕಸಭೆಗೆ ತಿಳಿಸಿದೆ.
    ವೆಚ್ಚ ಇಲಾಖೆಯ ಪಾವತಿ ಮತ್ತು ಸಂಶೋಧನಾ ಘಟಕದ ವಾರ್ಷಿಕ ವರದಿಯನ್ನು ಉಲ್ಲೇಖಿಸಿ ಕೇಂದ್ರದ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್​ ಈ ಕುರಿತ ಲಿಖಿತ ಉತ್ತರವನ್ನು ಲೋಕಸಭೆಗೆ ನೀಡಿದ್ದಾರೆ. ಇದರಂತೆ, 2018ರ ಮಾರ್ಚ್ 1ಕ್ಕೆ ಅನ್ವಯವಾಗುವ ಪ್ರಕಾರ 38,02,779 ಹುದ್ದೆಗಳು ಜಾರಿಯಾಗಿವೆ. ಇದಕ್ಕೆ ಪ್ರತಿಯಾಗಿ 31,18,956 ಹುದ್ದೆಗಳಷ್ಟೇ ಭರ್ತಿಯಾಗಿದ್ದು ಕೆಲಸ ಮುಂದುವರಿದಿದೆ. ಅಂದರೆ 6,83,823 ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

    ನಿವೃತ್ತಿ, ರಾಜೀನಾಮೆ, ಮರಣ, ಬಡ್ತಿ ಮತ್ತು ಇತರೆ ಕಾರಣಗಳಿಂದಾಗಿ ಇಷ್ಟು ಹುದ್ದೆಗಳು ಖಾಲಿ ಇವೆ. ನೇಮಕಾತಿ ನಿಯಮಗಳ ಪ್ರಕಾರ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 2019-20ರ ಅವಧಿಯಲ್ಲಿ ಯುಪಿಎಸ್​ಸಿ, ಎಸ್​ಎಸ್​ಸಿ, ಆರ್​ಆರ್​ಬಿಗಳು 1.34 ಲಕ್ಷ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿದ್ದವು.
    ಆರ್​ಆರ್​ಬಿ ಗರಿಷ್ಠ 1,16,391 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡರೆ, ಎಸ್​ಎಸ್​ಸಿ 13,995, ಯುಪಿಎಸ್​ಸಿ 4,399 ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಂಡಿವೆ. ಇದೇ ರೀತಿ ಅಂಚೆ ಸೇವೆ ಮಂಡಳಿ, ರಕ್ಷಣಾ ಸಚಿವಾಲಯ ಕೂಡ 3.39 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts