More

    ದೇಶದ ಅಭಿವೃದ್ಧಿಗೆ ಅತಿಯಾದ ಜನಸಂಖ್ಯೆ ಮಾರಕ

    ಹಾನಗಲ್ಲ: ಮಾನವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳುವ ದೇಶಕ್ಕೆ ಉತ್ತಮ ಭವಿಷ್ಯವಿದೆಯಾದರೂ, ಅತಿಯಾದ ಜನಸಂಖ್ಯೆ ದೇಶದ ಅಭಿವೃದ್ಧಿಗೆ ಮಾರಕ ಎಂಬ ಅರಿವು ಈಗ ನಮಗೆ ಅವಶ್ಯವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಅಭಿಪ್ರಾಯಪಟ್ಟರು.

    ಶನಿವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್​ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಇಲಾಖೆ, ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

    ತಾಲೂಕು ವೈದ್ಯಾಧಿಕಾರಿ ಡಾ. ಕೆ.ಜಿ. ಲಿಂಗರಾಜ ಮಾತನಾಡಿ, ಜನಸಂಖ್ಯೆ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಜಾಗೃತರಾಗಿ ಅಗತ್ಯ ಕ್ರಮಗಳನ್ನು ಅನುಸರಿಸಬೇಕು. ಎಲ್ಲ ಸಮಸ್ಯೆಗಳ ಮೂಲ ಈಗ ಜನಸಂಖ್ಯೆಯೇ ಎಂಬುದು ಎಲ್ಲರ ಅರಿವಿನಲ್ಲಿದ್ದರೂ ಕೂಡ ವೇಗದಲ್ಲಿ ಭಾರತದ ಜನಸಂಖ್ಯೆ ಬೆಳೆಯುತ್ತಿದೆ. ಈ ಕಾರಣಕ್ಕಾಗಿಯೇ ವಿಶ್ವ ಜನಸಂಖ್ಯೆ ದಿನಾಚರಣೆಯನ್ನು ಜಾಗೃತಿಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈಗಲಾದರೂ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಜನಸಂಖ್ಯೆಯ ಹೆಚ್ಚಳ ಅಪರಾಧಿ ಕೃತ್ಯಗಳಿಗೆ ಕಾರಣವಾಗಬಾರದು ಎಂದರು.

    ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ ಮಾತನಾಡಿದರು.

    ಪ್ರಾಚಾರ್ಯ ಮಾರುತಿ ಶಿಡ್ಲಾಪುರ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ ರವಿ ಕೊರವರ, ಸಿಪಿಐ ಎಸ್.ಆರ್. ಶ್ರೀಧರ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಗಿರೀಶ ರೆಡ್ಡೇರ, ಸಿಡಿಪಿಒ ಸಿ.ರಂಗನಾಥ, ಪುರಸಭೆ ಸದಸ್ಯರಾದ ವೀಣಾ ಗುಡಿ, ಮಮತಾ ಆರೆಗೊಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಂತೋಷ ಸುಣಗಾರ, ಸದಸ್ಯರಾದ ರಾಜಕುಮಾರ ಶಿರಪಂತಿ, ಶಿವಶಂಕರ ಹರಿಜನ, ಡಾ. ಶಿವಕುಮಾರ ಶಿವೂರ, ಬಸವರಾಜ ಹಾದಿಮನಿ, ಸುರೇಶ ನಾಗಣ್ಣನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts