More

    ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾವಹಿಸಿ

    ಕೂಡ್ಲಿಗಿ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಾರ್ವತ್ರಿಕ ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಾಗೂ ಅಭ್ಯರ್ಥಿಗಳ ವೆಚ್ಚಗಳ ಕುರಿತು ಸಹಾಯಕ ಚುನಾವಣಾಧಿಕಾರಿ ಡಾ.ಎಚ್.ಎನ್.ರಘು ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

    ವಿಜಯನಗರ ಜಿಪಂ ಮುಖ್ಯ ಲೆಕ್ಕಾಧಿಕಾರಿ ರಿಯಾಜ್ ಮಾತನಾಡಿ, ಮಾ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ತಿಳಿಸಲಾಗಿದೆ.

    ಇದನ್ನು ಓದಿ: ಕಾಂಡೋಮ್‌ ಪ್ಯಾಕ್‌ಗಳಲ್ಲಿ ರಾಜಕೀಯ ಪಕ್ಷಗಳ ಹೆಸರು; ಮತದಾರರನ್ನು ಸೆಳೆಯಲು ಹೊಸ ತಂತ್ರ

    ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ನಾಲ್ಕು ಕಡೆ ಚೆಕ್‌ಪೋಸ್ಟ್ ನಿರ್ಮಿಸಿದ್ದು, ಹಣ, ಮದ್ಯ, ಸೀರೆ ಸೇರಿದಂತೆ ಇತರ ವಸ್ತುಗಳನ್ನು ಸಾಗಿಸದಂತೆ ನಿಗಾ ವಹಿಸಲು ತನಿಖಾ ತಂಡಗಳ ಮೂಲಕ ತಪಾಸಣೆ ಮಾಡಲಾಗುತ್ತಿದೆ. ದಾಖಲೆ ಇದ್ದರೆ ಹಣ ಮುಟ್ಟುಗೋಲು ಹಾಕಿಕೊಳ್ಳಬಾರದು. ರಸೀದಿ ಇದ್ದಲ್ಲಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಬಾರದು. ಅಕ್ರಮವಾಗಿ ಸಾಗಿಸುತ್ತಿದ್ದರೆ ಜಪ್ತಿ ಮಾಡಿ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

    ರಾಜಕೀಯ ಭಾಷಣ ಸೇರಿದಂತೆ ಕಾರ್ಯಕ್ರಮದಲ್ಲಿ ಎಷ್ಟು ಜನ ಸೇರಿಸಿದ್ದಾರೆ. ಎಷ್ಟು ವಾಹನ ಬಳಕೆ ಮಾಡಿದ್ದಾರೆ ಎನ್ನುವುದು ಲೆಕ್ಕಹಾಕಿ ಅಭ್ಯರ್ಥಿಗಳ ವೆಚ್ಚಕ್ಕೆ ಹಾಕುವ ಕೆಲಸ ಮಾಡಬೇಕು. ವಿಡಿಯೋ ವಿಜಲಿಂಗ್ ಟೀಂ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜಕೀಯ ಚಟುವಟಿಕೆಗಳನ್ನು ಗಮನಿಸಿ ಅದನ್ನು ಪುಸ್ತಕದಲ್ಲಿ ದಾಖಲಿಸಿ, ಅಭ್ಯರ್ಥಿಗಳ ಖರ್ಚು-ವೆಚ್ಚದಲ್ಲಿ ಬರುವ ಹಾಗಿದ್ದರೆ ಅದನ್ನು ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

    ಮಾದರಿ ನೀತಿ ಸಂಹಿತೆಗೆ ಪೂರಕವಾಗಿ ಈ ಎಲ್ಲ ತಂಡಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರೆ ಮಾದರಿ ನೀತಿ ಸಂಹಿತೆ ಹಾಗೂ ಪಾರದರ್ಶಕ ಚುನಾವಣೆಗೆ ಅರ್ಥ ಬರುತ್ತದೆ. ಅದಕ್ಕಾಗಿ ನೇಮಿಸಿರುವ ತಂಡಗಳು ಸೈನಿಕರಂತೆ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದರು.

    ಕೂಡ್ಲಿಗಿ ಹಾಗೂ ಕೊಟ್ಟೂರು ತಹಸೀಲ್ದಾರ್‌ಗಳಾದ ರಾಜು ಪಿರಂಗಿ, ಅಮರೇಶ, ತಾಪಂ ಇಒ ವೈ.ರವಿಕುಮಾರ್, ಚುನಾವಣಾ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ, ನಾಗರಾಜ ಕೊಟ್ರಪ್ಪನವರ್ ಇತರರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts