

ಯಾದಗಿರಿ: ಶವವೊಂದನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿಯಾದ ಪ್ರಕರಣವೊಂದು ನಡೆದಿದೆ. ಬೆಂಗಳೂರಿನಿಂದ ಕಲಬುರಗಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಯಾದಗಿರಿ ಸಮೀಪ ಈ ಅಪಘಾತ ಸಂಭವಿಸಿದೆ.
ಕಲಬುರಗಿ ನಗರದ ನಿವಾಸಿ ರಾಜು (45) ನಿನ್ನೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದು, ಆತನ ಶವವನ್ನು ಆ್ಯಂಬುಲೆನ್ಸ್ನಲ್ಲಿ ಕಲಬುರಗಿಗೆ ಕೊಂಡೊಯ್ಯಲಾಗುತ್ತಿತ್ತು. ಆಗ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಸಹಿತ ಆ್ಯಂಬುಲೆನ್ಸ್ ಪಲ್ಟಿಯಾಗಿದೆ.
ಈ ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಳಿಕ ಕುಟುಂಬಸ್ಥರು ಇನ್ನೊಂದು ವಾಹನದಲ್ಲಿ ಶವ ಕೊಂಡೊಯ್ದರು. ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.