More

  ಮಗುಚಿ ಬಿದ್ದ ಬೋರ್‌ವೆಲ್ ಲಾರಿ

  ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ – ಪಾಲಾರ್ ಮಾರ್ಗದಲ್ಲಿ ಮಂಗಳವಾರ ನಿಯಂತ್ರಣ ತಪ್ಪಿದ ಬೋರ್‌ವೆಲ್ ಲಾರಿ ಮಗುಚಿ ಬಿದ್ದ ಪರಿಣಾಮ ಚಾಲಕ ಗಾಯಗೊಂಡಿದ್ದಾರೆ.

  ತಮಿಳುನಾಡಿನ ಸೇಲಂ ಜಿಲ್ಲೆಯ ಜ್ಯೋತಿವೇಲ್ (42) ಗಾಯಗೊಂಡವರು. ಮಧ್ಯಾಹ್ನ 12 ಗಂಟೆ ವೇಳೆಯಲ್ಲಿ ಮ.ಬೆಟ್ಟದಿಂದ ತಮಿಳುನಾಡಿಗೆ ಲಾರಿ ತೆರಳುತ್ತಿತ್ತು. ಈ ವೇಳೆ ಕಾವೇರಿ ಕುಡಿಯುವ ನೀರು ಸರಬರಾಜು ಜಾಕ್‌ವೆಲ್ ಬಳಿಯ ತಿರುವಿನಲ್ಲಿ ವಾಹನ ಚಾಲಕ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.

  ಪರಿಣಾಮ ಲಾರಿ ಮಗುಚಿ ಬಿದ್ದಿದೆ. ಬಳಿಕ ಸ್ಥಳೀಯರು ಗಾಯಾಳುವನ್ನು ಮ.ಬೆಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟರು. ಸುದ್ದಿ ತಿಳಿದು ಮ.ಬೆಟ್ಟದ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

  See also  ಭಾರತ್ ಅಕ್ಕಿ ವಿತರಣಾ ಕಾರ್ಯಕ್ರಮ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts