More

  ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

  ಚಾಮರಾಜನಗರ: ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ಆಕ್ಸಿಜನ್ ಪೂರೈಕೆಯಾಗದೆ ಭಾನುವಾರ ತಡರಾತ್ರಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಮೃತಪಟ್ಟ ದುರ್ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ದುರ್ಘಟನೆಯಲ್ಲಿ 2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೂ ಬಲಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮನಕಲಕುವಂತಿತ್ತು.

  ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡಹೊಮ್ಮ ಗ್ರಾಮದ ಯುವಕ ಸುರೇಂದ್ರ ಕೂಡ ಮೃತಪಟ್ಟಿದ್ದಾನೆ. ಇವರಿಗೆ ಎರಡು ತಿಂಗಳ ಹಿಂದಷ್ಟೆ ಚಾಮರಾಜನಗರ ತಾಲೂಕಿನ ಕೆರಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿತ್ತು. ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಇವರು, ಭಾನುವಾರ ರಾತ್ರಿ 11 ಗಂಟೆಯಲ್ಲಿ ಸಂಬಂಧಿಕರಿಗೆ ವಿಡಿಯೋ ಕಾಲ್ ಮಾಡಿದ್ದ. ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ರೋಗಿಗಳು ನನ್ನ ಕಣ್ಮುಂದೆಯೇ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ ಕೆಲವರು ಸತ್ತಿದ್ದಾರೆ. ನನಗೂ ಆಕ್ಸಿಜನ್ ನೀಡಿಲ್ಲ ತೊಂದರೆಯಾಗುತ್ತಿದೆ… ಎಂದು ಹೇಳಿಕೊಂಡಿದ್ದ.

  ಇದಾದ ಎರಡ್ಮೂರು ಸಾಸಿನಲ್ಲಿ ಆತನೂ ಪ್ರಾಣಬಿಟ್ಟಿದ್ದಾನೆ. ಸಾವಿನ ಸುದ್ದಿ ತಿಳಿದು ಆಸ್ಪತ್ರೆ ಬಳಿ ದೌಡಾಯಿಸಿದ ಸಂಬಂಧಿಕರು ಸುರೇಂದ್ರನನ್ನು ನೆನೆದು ಚೀರಾಡುತ್ತಿದ್ದರು. ಆಸ್ಪತ್ರೆಯಲ್ಲಿ ಆಕ್ಸಿಜನ್​ ಸಿಗ್ತಿಲ್ಲ ಎಂದು ಆತ ಕರೇ ಮಾಡಿದ್ದ. ಹೀಗೆ ಹೇಳಿ ಒಂದೆರಡು ಗಂಟೆಯೊಳಗೆ ಮೃತಪಟ್ಟಿದ್ದಾನೆ. ಆಕ್ಸಿಜನ್ ಸಿಲಿಂಡರ್ ಕೊರತೆಯಿಂದಲೇ ನಮ್ಮ ಮಗ ಸತ್ತಿದ್ದಾನೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ನವವಿವಾಹಿತ ಕೋವಿಡ್​ಗೆ ಬಲಿಯಾಗಿರುವುದು ದುರಂತ.

  ಚಾಮರಾಜನಗರದಲ್ಲಿ ಸತ್ತದ್ದು 24 ಅಲ್ಲ, 34 ಮಂದಿ! ಅಧಿಕಾರಿಗಳು ಮಾಹಿತಿ ಮುಚ್ಚಿಟ್ಟಿದ್ದಾರೆ…

  ಚಾಮರಾಜನಗರ ದುರಂತಕ್ಕೆ ಕ್ಷಮೆಯೇ ಇಲ್ಲ… ಆಕ್ಸಿಜನ್ ಕೊರತೆಯಿಂದಾಗಿದ್ದರೆ ಸರ್ಕಾರವೇ‌ ಹೊಣೆ: ಸಿ.ಟಿ.ರವಿ

  ಚಾಮರಾಜನಗರದಲ್ಲಿ 24 ಮಂದಿ ಸಾವು: ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪ ಗರಂ

  ಆಸ್ಪತ್ರೆ ಒಳಗೂ ಹೆಣಗಳ ರಾಶಿ, ಹೊರಗೂ ಹೆಣ… ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುತ್ತೆ ಚಾಮರಾಜನಗರದ ಘಟನೆ

  ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! ಮನಕಲಕುತ್ತೆ ಈ ಘಟನೆ

  ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts