More

    ದೇಶದ್ರೋಹ ಘೋಷಣೆ ಕೂಗಿದ್ದ ಕನ್ಹಯ್ಯ ಕುಮಾರ್​ ವಿರುದ್ಧ ಕ್ರಮಕ್ಕೆ ಅನುಮತಿ ನೀಡಿದ ದೆಹಲಿ ಸರ್ಕಾರದ ವಿರುದ್ಧ ಪಿ.ಚಿದಂಬರಂ ಅಸಮಾಧಾನ, ಟೀಕೆ…

    ನವದೆಹಲಿ: ದೆಹಲಿ ಜವಾಹರ್ ಲಾಲ್​ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು 9 ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣದಡಿ ಕಾನೂನು ಕ್ರಮ ಕೈಗೊಳ್ಳಲು ದೆಹಲಿ ಸರ್ಕಾರ ಒಪ್ಪಿಗೆ ನೀಡಿರುವುದನ್ನು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟೀಕಿಸಿದ್ದಾರೆ.

    ಕನ್ಹಯ್ಯ ಕುಮಾರ್​ 2016ರಲ್ಲಿ ದೇಶದ್ರೋಹದ ಘೋಷಣೆ ಕೂಗಿದ್ದರು. ಕ್ಯಾಂಪಸ್​ನಲ್ಲಿ ಅವರು ಘೋಷಣೆ ಕೂಗಿದಾಗ ಇನ್ನೂ ಕೆಲವರು ಅದಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಇವರೆಲ್ಲರ ವಿರುದ್ಧ ಕಳೆದ ವರ್ಷ ದೆಹಲಿ ಪೊಲೀಸರು ನಗರದ ನ್ಯಾಯಾಲಯದಲ್ಲಿ ಚಾರ್ಜ್​ಶೀಟ್​ ಸಲ್ಲಿಸಿದ್ದರು.

    ಕನ್ಹಯ್ಯ ಕುಮಾರ್​ ಮತ್ತಿತರರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯ ಆಮ್​ ಆದ್ಮಿ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅದಾದ ಒಂದು ವರ್ಷಗಳ ಬಳಿಕ ಅರವಿಂದ್​ ಕೇಜ್ರಿವಾಲ್ ನೇತೃತ್ವದ ಸರ್ಕಾರ ಈಗ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ ಕನ್ಹಯ್ಯ ಕುಮಾರ್​ ವಿರುದ್ಧ ಕ್ರಮಕ್ಕೆ ಅನುಮತಿ ನೀಡಿದ ದೆಹಲಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಹಿರಿಯ ನಾಯಕ ಪಿ.ಚಿದಂಬರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಟ್ವೀಟ್ ಮಾಡಿರುವ ಅವರು, ದೇಶದ್ರೋಹಕ್ಕೆ ಸಂಬಂಧಪಟ್ಟ ಕಾನೂನಿನ ಬಗ್ಗೆ ದೆಹಲಿ ಸರ್ಕಾರಕ್ಕೆ ಕೇಂದ್ರ ಸರ್ಕಾರಕ್ಕಿಂತಲೂ ಕಡಿಮೆ ತಿಳಿವಳಿಕೆ ಇದೆ ಎಂಬುದು ಅಚ್ಚರಿಯ ಸಂಗತಿ ಎಂದು ಹೇಳಿದ್ದಾರೆ.

    ಅಲ್ಲದೆ, ಕನ್ಹಯ್ಯ ಕುಮಾರ್ ಹಾಗೂ ಇತರರ ವಿರುದ್ಧ ಐಪಿಸಿ ಸೆಕ್ಷನ್​ 124 ಎ ಮತ್ತು 120 ಬಿ ಅಡಿಯಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಲು ದೆಹಲಿ ಸರ್ಕಾರ ನೀಡಿದ ಅನುಮತಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ನಿರ್ಧಾರಕ್ಕೆ ನನ್ನ ಸಹಮತ ಇಲ್ಲ ಎಂದು ಚಿದಂಬರಂ ಹೇಳಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts