ರಾಮಕುಂಜೇಶ್ವರ ಶಾಲೆ ವಿದ್ಯಾರ್ಥಿಗಳಿಂದ ನೇಜಿನಾಟಿ

naati
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಆಲಂಕಾರಿನ ಮೂಲೆತಮಜಲು ಬಿ.ಎಲ್.ಜನಾರ್ದನರವರ ಗದ್ದೆಯಲ್ಲಿ ನೇಜಿ ನಾಟಿ ಮಾಡಿದರು.
Published on

ಕಡಬ: ಗದ್ದೆಯಲ್ಲಿ ಬರುವ ಫಸಲಿನ ಅರ್ಧಾಂಶವನ್ನು ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಿಸಿಯೂಟದ ಮೂಲಕ ಆಹಾರವಾಗಿ ನೀಡುವ ಈ ನೆನಪು ವಿದ್ಯಾರ್ಥಿಗಳ ಜೀವನದಲ್ಲಿ ಸದಾ ಉಳಿಯಲು ಸಹಕಾರವಾಗುತ್ತದೆ ಎಂದು ರಾಮಕುಂಜೇಶ್ವರ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಹೇಳಿದರು.

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿದ್ಯಾರ್ಥಿ ನಿಲಯ ರಾಮಕುಂಜ ಹಾಗೂ ನೇತ್ರಾವತಿ ತುಳುಕೂಟ ರಾಮಕುಂಜ ಇದರ ವತಿಯಿಂದ ಮಕ್ಕಳಿಗೆ ಭತ್ತ ಗದ್ದೆಯ ನಾಟಿ ಪ್ರಾಯೋಗಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಲಂಕಾರಿನ ಮೂಲೆತಮಜಲು ಬಿ.ಎಲ್.ಜನಾರ್ದನರವರ ಗದ್ದೆಯಲ್ಲಿ ವಿದ್ಯಾರ್ಥಿಗಳು ನೇಜಿನಾಟಿ ಮಾಡಿದರು. ಬಳಿಕ ಗದ್ದೆಯ ಕೃಷಿ ವಿಧಾನ ಹಾಗೂ ಅದರ ಉಪಯುಕ್ತತೆ ಬಗ್ಗೆ ಬಿ.ಎಲ್.ಜನಾರ್ದನ ವಿವರಿಸಿದರು.

ರಕ್ಷಕ-ಶಿಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಸಾಯಿರಾಂ, ಪ್ರಸ್ತುತ ಅಧ್ಯಕ್ಷ ಹರೀಶ್ ಬಾರಿಂಜ, ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ, ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಸ್ಥಳೀಯರಾದ ವಿನಯ ಕೆದಿಲ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳ ಸೇರಿದಂತೆ ಸುಮಾರು 200 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net