More

    ಮುಂಗಾರಿನಲ್ಲಿ ದಾಖಲೆ ಬಿತ್ತನೆ

    ಕೊಲ್ಲೂರು: ಕೃಷಿ ಭೂಮಿ ಪಾಳು ಬಿಡುವವರನ್ನು ಸಮಾಜ ಹೀನ ಭಾವನೆಯಿಂದ ನೋಡುವ ಕಾಲವೊಂದಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರು ಹಾಗೂ ಯುವಜನರಲ್ಲಿ ಈ ಭಾವನೆ ಪರಿವರ್ತನೆಯಾಗಿದ್ದು, ಪ್ರಸಕ್ತ ಮುಂಗಾರಿನಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಬಿತ್ತನೆ ಮಾಡಲಾಗಿದೆ. ದೇಶದಲ್ಲಿ ಲಾಕ್‌ಡೌನ್ ಹೇರಿಕೆಯಿಂದ ಕೃಷಿ ವಲಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸಂಜೀವ ನಾಯ್ಕ ಹೇಳಿದರು.

    ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸಂಘದ ಆವರಣದಲ್ಲಿ ಆಯೋಜಿಸಿದ ಸಮಗ್ರ ಕೃಷಿ ಮಾಹಿತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಇಂದು ಸಾವಯವ ಮತ್ತು ರಸಗೊಬ್ಬರ ನಡುವೆ ಸಮತೋಲನ ಕಾಪಾಡುವ ಅಗತ್ಯವಿದೆ. ಅದರ ಕುರಿತು ತರಬೇತಿ ಪಡೆದುಕೊಳ್ಳಬೇಕು. ಅದರೊಂದಿಗೆ ತೋಟಗಾರಿಕೆ, ಹೈನುಗಾರಿಕೆ, ಕೋಳಿಸಾಕಣೆ ನಡೆಸುವುದಲ್ಲದೆ ಸುಲಭದಲ್ಲಿ ಆರೋಗ್ಯ ನೀಡುವ ಪಪ್ಪಾಯಿ, ನುಗ್ಗೆ, ಬಸಳೆ, ತೊಂಡೆ, ಸೌತೆ, ಬಾಳೆಗಳನ್ನು ಬೆಳೆಸಿ ಮನೆಯ ಖರ್ಚಿಗೆ ಬಳಸಿಕೊಂಡು ಸ್ವಾವಲಂಬನೆ ಸಾಧಿಸಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಸಂಘದ ಉಪಾಧ್ಯಕ್ಷ ಸಂದೀಪ್ ಆರ್. ಶಿಬಿರ ಉದ್ಘಾಟಿಸಿದರು. ಈ ಸಂದರ್ಭ ಭಾರತೀಯ ಪಾರಂಪರಿಕ ಕೃಷಿ ಪದ್ಧತಿ. ಜೇನು ಸಾಕಣೆ, ಹೈನುಗಾರಿಕೆ, ಸಾವಯವ ಕೃಷಿ, ತೋಟಗಾರಿಕಾ ಇಲಾಖೆಯಿಂದ ನೀಡಲಾಗುವ ವಿವಿಧ ಸವಲತ್ತು ಹಾಗೂ ಆತ್ಮನಿರ್ಭರ ಯೋಜನೆಯಲ್ಲಿ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿ ಸಂಜೀವ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಸಂಘದ ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಗಣೇಶ್ ಭಟ್ ಸ್ವಾಗತಿಸಿದರು. ನಾಗೇಂದ್ರ ಬಳೆಗಾರ್ ವಂದಿಸಿದರು.

    ಕೃಷಿ ವಲಯಕ್ಕೆ ಸರ್ಕಾರಗಳು ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ಬೆಳೆ ವಿಮೆ ಹಾಗೂ ಕಡಿಮೆ ದರದಲ್ಲಿ ರಸಗೊಬ್ಬರ ಮತ್ತಿತರ ಕೃಷಿಗೆ ಪೂರಕವಾದ ಉಪಕರಣಗಳನ್ನು ನೀಡುವಂತಹ ಪರಿಣಾಮಕಾರಿ ಯೋಜನೆ ರೂಪಿಸಿದೆ. ಪ್ರಧಾನಿಯವರ ಆತ್ಮನಿರ್ಭರ ಭಾರತ ಯೋಜನೆ ಮೂಲಕ ಗ್ರಾಮೀಣ ಪ್ರದೇಶದಲ್ಲಾಗುತ್ತಿರುವ ಆರ್ಥಿಕ ಚೇತರಿಕೆ ರೈತರಿಗೆ ವರದಾನವಾಗಲಿದೆ.
    ಸಂಜೀವ ನಾಯ್ಕ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕುಂದಾಪುರ

    ಚಿತ್ರ: ಬಿವೈಎನ್-ಸೆ.05-3
    ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸಂಘದ ಆವರಣದಲ್ಲಿ ನಡೆದ ಸಮಗ್ರ ಕೃಷಿ ಮಾಹಿತಿ ಶಿಬಿರವನ್ನು ಸಂಘದ ಉಪಾಧ್ಯಕ್ಷ ಸಂದೀಪ್ ಆರ್. ಶಿಬಿರ ಉದ್ಘಾಟಿಸಿದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸಂಜೀವ ನಾಯ್ಕ, ಮುಖ್ಯಕಾರ್ಯನಿರ್ವಹಣಾಧಿಕಾರಿ ಗಣೇಶ್ ಭಟ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts