More

    ಅಕಾಲಿಕ ಮಳೆಗೆ 5,100 ಹೆಕ್ಟೇರ್ ಭತ್ತ ಹಾನಿ

    ರಾಯಚೂರು: ಇತ್ತೀಚೆಗೆ ಸುರಿದ ಅಕಾಲಿಕ ಮಳೆಗೆ ಜಿಲ್ಲೆಯಲ್ಲಿ 5,100 ಹೆಕ್ಟೇರ್ ಪ್ರದೇಶದಲ್ಲಿನ ಭತ್ತ ಹಾನಿಯಾಗಿದ್ದರೆ, ಮುಂಗಾರು ಮಳೆ ವಿಲವಾಗಿದ್ದರಿಮದ 1.15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಹಾನಿಗೊಳಗಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.
    ತಾಲೂಕಿನ ಗೋನಾಳ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಯಿಲ್ಲದ ಕಾರಣ ಹೆಚ್ಚಿನ ಪ್ರಮಾಣದ ಬೆಳೆ ಹಾನಿಗೊಳಗಾಗಿದ್ದು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ 17 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕೋರಲಾಗಿದೆ ಎಂದರು.
    ಜಿಲ್ಲೆಯಲ್ಲಿ ಬೆಳೆ ಹಾನಿ ಕುರಿತು ಅಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಹತ್ತಿ, ತೊಗರಿ, ಸಜ್ಜೆ, ಜೋಳ ಹಾನಿಗೊಳಗಾಗಿರುವುದು ಕಂಡು ಬಂದಿದೆ. ಹಿಂಗಾರು ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.
    ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್, ಕೆಪಿಸಿಸಿ ಕಾರ್ಯದರ್ಶಿ ಎ.ವಸಂತಕುಮಾರ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ, ಮುಖಂಡರಾದ ಶಿವಪ್ಪ ನಾಯಕ, ಡಾ.ರಜಾಕ್ ಉಸ್ತಾದ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts