ಕಡೂರು: ಸರಸ್ವತಿಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎಸ್.ಕೆ.ಪದ್ಮನಾಭ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷ ಕಂಸಾಗರ ಸೋಮಶೇಖರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಚುನವಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಕೆ.ಪದ್ಮನಾಭ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನವಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಂಜಿನಿಯರ್ ಬಸವರಾಜ್ನಾಯ್ಕ್ ಕಂಸಾಗರ ಸೋಮಶೇಖರ್ ಅವರ ಅವಿರೋಧ ಆಯ್ಕೆ ಘೋಷಿಸಿದರು.
ನಂತರ ನಡೆದ ಅಭಿನಂದನಾ ಸಭೆಯಲ್ಲಿ ಅಧ್ಯಕ್ಷ ಎಸ್.ಕೆ.ಪದ್ಮನಾಭ ಮಾತನಾಡಿ, ಗ್ರಾಪಂನಲ್ಲಿ ಎಲ್ಲ ಸದಸ್ಯರ ವಿಶ್ವಾಸ ಪಡೆದು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರ ಸಹಕಾರ ಪಡೆದು ಅಭಿವೃದ್ಧಿ ಕಾರ್ಯಗಳಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು. ಗ್ರಾಪಂ ಉಪಾಧ್ಯಕ್ಷೆ ವಿಜಯಾ ಬಾಯಿ, ಸದಸ್ಯರಾದ ಅನಿತಾ ರಂಗಸ್ವಾಮಿ, ಮಂಜುಳಮ್ಮ ಚಂದ್ರಮ್ಮ, ಸಿ.ವಿ.ಆನಂದ್, ಲಾವಣ್ಯ ವೆಂಕಟೇಶ್, ಸಿ.ಎಸ್.ಮಂಜುನಾಥ್, ಎಸ್.ಟಿ. ಸಂತೋಷ್, ಪಿಡಿಒ ಬಸವರಾಜ್ನಾಯ್ಕ್, ತಾಪಂ ಮಾಜಿ ಉಪಾಧ್ಯಕ್ಷ ದಾಸಯ್ಯನಗುತ್ತಿ ಚಂದ್ರಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಕಂಸಾಗರ ರೇವಣ್ಣ ಇದ್ದರು.
ಸರಸ್ವತಿಪುರ ಗ್ರಾಮ ಪಂಚಾಯತಿಗೆ ಪದ್ಮನಾಭ ಅಧ್ಯಕ್ಷ
You Might Also Like
ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್ ಮಾಡಿಕೊಳ್ಳಿ
ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…
ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!
ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈಗ ಹೇಳಿರುವ ಸರಳ ಪರಿಹಾರಗಳನ್ನು…
ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!
ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…