18.5 C
Bangalore
Monday, December 16, 2019

ಅತಂತ್ರ ಸ್ಥಿತಿಯಲ್ಲಿ ಗ್ರಂಥಾಲಯ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಹೇಮನಾಥ್ ಪಡುಬಿದ್ರಿ
ಜನನಿಬಿಡ ಮಾರುಕಟ್ಟೆಯ ವಾಣಿಜ್ಯ ಕಟ್ಟಡದ ಪ್ರಥಮ ಮಹಡಿಯಲ್ಲಿ ಕಾರ‌್ಯಾಚರಿಸುತ್ತಿರುವ ಪಡುಬಿದ್ರಿ ಗ್ರಂಥಾಲಯಕ್ಕೆ ಪ್ರವೇಶಿಸುವುದೇ ಬಲುದೊಡ್ಡ ಸಾಹಸ.

ಗ್ರಾಮ ಪಂಚಾಯಿತಿ ಕಟ್ಟಡದ ನೆಲ ಅಂತಸ್ತಿನಲ್ಲಿ ಕಾರ‌್ಯಾಚರಿಸುತ್ತಿದ್ದ ಗ್ರಂಥಾಲಯವನ್ನು 10 ವರ್ಷ ಹಿಂದೆ ಪೇಟೆಯ ಪ್ರವಾಸಿ ಬಂಗ್ಲೆಗೆ ಸ್ಥಳಾಂತರಿಸಲಾಯಿತು. ಎಂಟು ವರ್ಷಗಳ ಹಿಂದೆ ಅಲ್ಲಿಂದ ಸ್ಥಳಾಂತರಿಸಿ ಮಾರುಕಟ್ಟೆಯಲ್ಲಿನ ಗ್ರಾಪಂ ವಾಣಿಜ್ಯ ಮಳಿಗೆ ಕಟ್ಟಡದ ಮೇಲಂತಸ್ತಿನಲ್ಲಿ ಅವಕಾಶ ಕಲ್ಪಿಸಲಾಯಿತು. ಪರಿಣಾಮ ಗ್ರಂಥಾಲಯಕ್ಕೆ ಬಂದು ಓದುವವರ ಸಂಖ್ಯೆ ಕುಂಠಿತವಾಗತೊಡಗಿತು.

6,235 ಪುಸ್ತಕಗಳು, 558 ಸದಸ್ಯರನ್ನು ಹೊಂದಿರುವ ಗ್ರಂಥಾಲಯದಲ್ಲಿ ಒಂದು ಹಂತದಲ್ಲಿ ದಿನವಹಿ 20ಕ್ಕೂ ಅಧಿಕ ಮಂದಿ ಓದಲು ಆಗಮಿಸುತ್ತಿದ್ದರೆ, ಪ್ರಸ್ತುತ ಏಕ ಅಂಕಿಯ ಜನರಷ್ಟೇ ಓದಲು ಆಗಮಿಸುತ್ತಾರೆ. ಯುವ ಪೀಳಿಗೆ ಗ್ರಂಥಾಲಯ ಕಡೆ ಒಲವು ತೋರಿಸದಿರುವ ಈ ದಿನಗಳಲ್ಲಿ ಹಿರಿಯರಷ್ಟೇ ಗ್ರಂಥಾಲಯಕ್ಕೆ ಭೇಟಿ ಕೊಡುತ್ತಾರೆ. ಇಕ್ಕಟ್ಟಾದ ಮಹಡಿ ಮೆಟ್ಟಿಲುಗಳಿರುವ ಮೇಲಂತಸ್ತಿನ ಈ ಕಚೇರಿ ಹತ್ತುವುದೇ ಕಷ್ಟ. ವಾರದ ಸಂತೆ ದಿನ ಮಂಗಳವಾರ ಶಬ್ದಮಾಲಿನ್ಯದಿಂದ ಗ್ರಂಥಾಲಯ ಮುಚ್ಚಲೇಬೇಕಾದ ಅನಿವಾರ್ಯತೆ ಇಲ್ಲಿದೆ.
ಆರು ತಿಂಗಳಿಂದ ವಿದ್ಯುತ್ತಿಲ್ಲ

ಗ್ರಂಥಾಲಯವನ್ನು ಜಿಲ್ಲಾ ಕೇಂದ್ರ ಗ್ರಂಥಾಲಯ ಮೂಲಕ ನಿರ್ವಹಣೆ ಮಾಡಲಾಗುತ್ತಿತ್ತು. ಆದರೆ ಕಟ್ಟಡದ ಮೂಲಸೌಕರ್ಯ ನಿರ್ವಹಣೆ ಗ್ರಾಪಂ ಮಾಡುತ್ತಿತ್ತು. ಆರು ತಿಂಗಳಿನಿಂದ ಕಟ್ಟಡದ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಮೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ಕಟ್ಟಡದ ಕಿಟಕಿ ಬಾಗಿಲುಗಳು ನಾದುರಸ್ತಿಯಲ್ಲಿದ್ದು, ಬೆಕ್ಕು ಇಲಿಗಳ ವಾಸಸ್ಥಾನವಾಗುತ್ತಿದೆ. ಕಚೇರಿಗೆ ಅಳವಡಿಸಿದ್ದ ಶಟರ್ ಕೂಡ ಕಿತ್ತು ಹೋಗಿದೆ. ಕಟ್ಟಡ ನಾದುರಸ್ತಿಯಲ್ಲಿರುವುದರಿಂದ ಮಳೆಗಾಲದಲ್ಲಿ ಪುಸ್ತಕಗಳೆಲ್ಲ ಒದ್ದೆಯಾಗುವ ಭೀತಿ ಎದುರಾಗಿದೆ ಎನ್ನುತ್ತಾರೆ ಗ್ರಂಥಾಲಯ ಮೇಲ್ವಿಚಾರಕಿ.

ಕಟ್ಟಡದ ಸಮಸ್ಯೆ ಹಾಗೂ ಗ್ರಂಥಾಲಯಕ್ಕೆ ಗ್ರಾಪಂ ಕಚೇರಿ ಕಟ್ಟಡದಲ್ಲೇ ಅವಕಾಶ ಕಲ್ಪಿಸುವಂತೆ ಗ್ರಾಪಂಗೆ ಮನವಿ ಮಾಡಲಾಗಿದೆ. ಅನುದಾನ ಕೊರತೆಯಿಂದ ಒಂದು ವೃತ್ತಪತ್ರಿಕೆಯನ್ನಷ್ಟೇ ಕೊಂಡುಕೊಳ್ಳಲಾಗುತ್ತಿದೆ. ಗೌರವ ಸಂಭಾವನೆಯೂ ನಾಲ್ಕು ತಿಂಗಳಿನಿಂದ ಕೈಸೇರಿಲ್ಲ. ಈ ಬಗ್ಗೆ ಕೇಂದ್ರ ಗ್ರಂಥಾಲಯದಿಂದ ಮಾಸಿಕ ವರದಿ ನೀಡುವಂತೆ ಸೂಚನೆ ಬಂದಿದೆ ಎಂದು ಗ್ರಂಥಾಲಯ ಮೇಲ್ವಿಚಾರಕಿ ಮಾಹಿತಿ ನೀಡಿದ್ದಾರೆ.

ಗ್ರಂಥಾಲಯದ ಶಟರ್ ದುರಸ್ತಿ ಮಾಡುವಂತೆ ಸೂಚಿಸಲಾಗಿದೆ. ಒಂದು ವೇಳೆ ಅವರು ದುರಸ್ತಿಪಡಿಸದಿದ್ದಲ್ಲಿ ಗ್ರಾಪಂ ಮೂಲಕ ದುರಸ್ತಿ ಮಾಡಲಾಗುವುದು. ಗ್ರಾಪಂನ ನೂತನ ಕಟ್ಟಡದಲ್ಲಿ ಗ್ರಂಥಾಲಯ ಕಚೇರಿಗೂ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ ಸರ್ಕಾರ ಗ್ರಂಥಾಲಯ ಇಲಾಖೆಯ ಸುಪರ್ದಿಯಲ್ಲಿದ್ದ ಗ್ರಂಥಾಲಯಗಳನ್ನು ಗ್ರಾಪಂ ಅಧೀನಕ್ಕೆ ವಹಿಸಿ ಸುತ್ತೋಲೆ ಹೊರಡಿಸಿದೆ. ಆದರೆ ಈವರೆಗೂ ಹಸ್ತಾಂತರವಾಗಿಲ್ಲ.
ಪಂಚಾಕ್ಷರಿ ಸ್ವಾಮಿ ಕೆರಿಮಠ, ಪಡುಬಿದ್ರಿ ಗ್ರಾಪಂ ಪಿಡಿಒ.

ಫೆಬ್ರವರಿ ಅನಂತರ ಗ್ರಾಪಂ ಗ್ರಂಥಾಲಯಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸುಪರ್ದಿಗೆ ವಹಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿ ಆದೇಶವನ್ನೂ ನೀಡಿದೆ. ಎಲ್ಲ ಗ್ರಾಪಂಗಳಿಗೂ ಈ ಆದೇಶ ಈಗಾಗಲೇ ನೀಡಲಾಗಿದೆ. ಬಾಕಿಯಿರುವ ಗೌರವ ಸಂಭಾವನೆ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ.
ನಳಿನಿ, ಗ್ರಂಥಾಲಯ ಅಧಿಕಾರಿ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...