ಪಹಲ್ಗಾಮ್ ರಕ್ತಪಾತ; ಭಯೋತ್ಪಾದಕ ದಾಳಿ ವಿರುದ್ಧ ಸಿಡಿದೆದ್ದ ಬಾಲಿವುಡ್ ನಟ ಶಾರುಖ್ ಖಾನ್| terror attack

Sharukh Khan
Published on

terror attack| ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತಂತೆ ಖ್ಯಾತ ನಟ ಶಾರುಖ್ ಖಾನ್ ಸೋಷಿಯಲ್​ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಈ ದಾಳಿ ಬಗ್ಗೆ ಚಿತ್ರರಂಗದ ಅನೇಕ ಗಣ್ಯರು ಹಾಗೂ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಇದೀಗ ಬಾಲಿವುಡ್​ ನಟ ಶಾರುಖ್ ಖಾನ್ ಕೂಡ ಟ್ವೀಟ್ ಮಾಡುವ ಮೂಲಕ ಇದನ್ನು ಘೋರ ಕೃತ್ಯ ಎಂದು ಕರೆದಿದ್ದಾರೆ.

ಶಾರುಖ್ ಖಾನ್ ಟ್ವೀಟ್​ನಲ್ಲಿ ಹೇಳಿದ್ದೇನು?

ಪಹಲ್ಗಾಮ್‌ನಲ್ಲಿ ನಡೆದ ವಿಶ್ವಾಸಘಾತುಕತನ ಮತ್ತು ಅಮಾನವೀಯ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳು ಸಾಲದಂತಾಗಿದೆ. ಇಂತಹ ಸಮಯದಲ್ಲಿ ನಾವು ದೇವರ ಕಡೆಗೆ ತಿರುಗಿ ಸಂತ್ರಸ್ತ ಕುಟುಂಬಗಳಿಗಾಗಿ ಪ್ರಾರ್ಥನೆ ಸಲ್ಲಿಸಬೇಕು ಮತ್ತು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ನಾವು ಒಂದು ರಾಷ್ಟ್ರವಾಗಿ ಒಗ್ಗಟ್ಟಿನಿಂದ, ಬಲವಾಗಿ ನಿಂತು ಈ ಘೋರ ಕೃತ್ಯದ ವಿರುದ್ಧ ನ್ಯಾಯವನ್ನು ಪಡೆಯೋಣ ಎಂದು ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿ ಹಾಗೂ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನೂ ಶಾರುಖ್ ಖಾನ್ ಜೊತೆಗೆ, ಸಿದ್ಧಾರ್ಥ್ ಮಲ್ಹೋತ್ರಾ, ಸೋನು ಸೂದ್, ಅನುಪಮ್ ಖೇರ್, ಕತ್ರಿನಾ ಕೈಫ್, ಆಲಿಯಾ ಭಟ್, ಪ್ರಿಯಾಂಕಾ ಚೋಪಾ ಮತ್ತು ಅಲ್ಲು ಅರ್ಜುನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಭಯೋತ್ಪಾದಕ ದಾಳಿಯ ಬಗ್ಗೆ ಆಘಾತ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net