

terror attack| ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿಯಾಗಿದೆ. ಆದ್ದರಿಂದ ಜಮ್ಮು ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ.
ರಾಜ್ಯ ಸರ್ಕಾರ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಪ್ರವಾಸಿಗರ ಸಂಬಂಧಿಕರು, ಪರಿಚಯಸ್ಥರು ಅಥವಾ ಟೂರ್ ಏಜೆನ್ಸಿಯವರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ನೀಡಲು ತಕ್ಷಣವೇ ಈ ಸಂಖ್ಯೆಗಳಿಗೆ ಕರೆ ಮಾಡುವಂತೆ ಸೂಚಿಸಲಾಗಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಕರ್ನಾಟಕದ ಅನೇಕ ಪ್ರವಾಸಿಗರು ಅಲ್ಲಿ ಸಿಲುಕಿದ್ದಾರೆ. ಅವರನ್ನು ಕರೆತರಲು ಕರ್ನಾಟಕ ಸರ್ಕಾರ ಇದೀಗ ಕರ್ನಾಟಕ ಸರ್ಕಾರ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಿದೆ. ರಾಜ್ಯದ ಪ್ರವಾಸಿಗರ ಸಂಬಂಧಿಕರು, ಕುಟುಂಬಸ್ಥರು ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ.
(ಏಜೆನ್ಸೀಸ್)