ಪಹಲ್ಗಾಮ್ ರಕ್ತಪಾತ; ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುತ್ತೇನೆ; ಮುಕೇಶ್ ಅಂಬಾನಿ | Mukesh Ambani

Mukesh Ambani
Published on

Mukesh Ambani | ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರಿಗೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದ್ದಾರೆ.

ಇನ್ನೂ ಈ ಬಗ್ಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಟ್ವೀಟ್​ ಮಾಡಿದ್ದು, 2025 ರ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಬರ್ಬರ ಭಯೋತ್ಪಾದಕ ದಾಳಿಯಲ್ಲಿ ಅಮಾಯಕ ಭಾರತೀಯರ ಸಾವಿಗೆ ರಿಲಯನ್ಸ್ ಕುಟುಂಬದ ಎಲ್ಲರೂ ನನ್ನ ಜೊತೆ ಸೇರಿದ್ದಾರೆ. ಬಲಿಪಶುಗಳ ಕುಟುಂಬಗಳಿಗೆ ನಾವು ನಮ್ಮ ಹೃತ್ಪೂರ್ವಕ ಸಂತಾಪ ಸೂಚಿಸುತ್ತೇವೆ. ದಾಳಿಯಲ್ಲಿ ಗಾಯಗೊಂಡ ಎಲ್ಲರಿಗೂ ನಾವು ತ್ವರಿತ ಮತ್ತು ಸಂಪೂರ್ಣ ಚೇತರಿಕೆಯನ್ನು ಬಯಸುತ್ತೇವೆ.

Pahalgam Terror Attack

(ಏಜೆನ್ಸೀಸ್)

ಮುಂಬೈನಲ್ಲಿರುವ ನಮ್ಮ ರಿಲಯನ್ಸ್ ಫೌಂಡೇಶನ್ ಸರ್ ಎಚ್‌ಎನ್ ಆಸ್ಪತ್ರೆ ಎಲ್ಲಾ ಗಾಯಾಳುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತದೆ. ಭಯೋತ್ಪಾದನೆ ಮಾನವೀಯತೆಯ ಶತ್ರು. ಅದನ್ನು ಯಾರೂ ಯಾವುದೇ ರೀತಿಯಲ್ಲಿ ಬೆಂಬಲಿಸಬಾರದು. ಭಯೋತ್ಪಾದನೆಯ ಪಿಡುಗಿನ ವಿರುದ್ಧದ ನಿರ್ಣಾಯಕ ಯುದ್ಧದಲ್ಲಿ ನಾವು ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿಗಳು, ಭಾರತ ಸರ್ಕಾರ ಮತ್ತು ಇಡೀ ದೇಶದೊಂದಿಗೆ ಸಂಪೂರ್ಣವಾಗಿ ನಿಲ್ಲುತ್ತೇವೆ ಎಂದು ಬರೆಯಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net