

Jammu and Kashmir: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ ಮೂವರು ಶಂಕಿತ ಭಯೋತ್ಪಾದಕರ ಪತ್ತೆಗೆ ಅವರ ಪೋಸ್ಟರ್ ಬಿಡುಗಡೆ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಭದ್ರತಾ ಸಂಸ್ಥೆಗಳು, ಉಗ್ರರ ಬಗ್ಗೆ ಮಾಹಿತಿ ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿದೆ.
ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಭದ್ರತಾ ಸಂಸ್ಥೆಗಳು ಭರವಸೆ ನೀಡಿವೆ. ಇದಕ್ಕೂ ಮುನ್ನ ಭದ್ರತಾ ಸಂಸ್ಥೆಗಳು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ ಮೂವರು ಪುರುಷರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದವು. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂಬ ಮೂವರು ಪಾಕಿಸ್ತಾನೀಯರು ಈ ವ್ಯಕ್ತಿಗಳಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರು ಹತ್ಯೆಯಾಗಿದ್ದಾರೆ.
ಅಮಾಯಕರ ಹತ್ಯೆಗೆ ಸೇಡು ತೀರಿಸಿಕೊಳ್ಳಲು, ಭಾರತೀಯ ಸಶಸ್ತ್ರ ಪಡೆಗಳು ಮೇ 7, 2025 ರಂದು 'ಆಪರೇಷನ್ ಸಿಂಧೂರ' ಅನ್ನು ಪ್ರಾರಂಭಿಸಿದವು. ಈ ಕಾರ್ಯಾಚರಣೆಯಲ್ಲಿ, ಅವರು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ (ಪಿಒಕೆ)ದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರು ದಾಳಿ ಮಾಡಿದೆ. (ಏಜೆನ್ಸೀಸ್)