ಪಹಣಿಗಳಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದು ಹಿನ್ನೆಲೆ ಇಂಡಿಯಲ್ಲಿ ಪ್ರತಿಭಟನಾ ರ‌್ಯಾಲಿ

Pahani, Waqf Board, Indi, Protest Rally, Vishwa Hindu Parishad, Bajrang Dal, Mathadhisar, Waqf Hatao, Kisan Bachao, Tadawalaga,

ಇಂಡಿ: ರಾಜ್ಯದ ವಿವಿಧ ಪಹಣಿಗಳಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಾಗಿರುವುದನ್ನು ತೆಗೆಯಬೇಕೆಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ರ‌್ಯಾಲಿ ನಡೆಸಿದರು.

ವಕ್ಫ್ ಹಟಾವೋ, ಕಿಸಾನ್ ಬಚಾವೋ ಘೋಷವಾಕ್ಯದಡಿ ವಿಶ್ವ ಹಿಂದು ಪರಿಷತ್ ಪ್ರತಿಭಟನೆಯನ್ನು ಬೆಂಬಲಿಸಿ ಮಠಾಧೀಶರು ಪಾಲ್ಗೊಂಡಿದ್ದರು. ತಾಲೂಕಿನ ವಿವಿಧ ಭಾಗದ ಸ್ವಾಮೀಜಿಗಳು ಭಾಗವಹಿಸಿ ಬೆಂಬಲ ಸೂಚಿಸಿದರು.

ಪಟ್ಟಣದ ಶಾಂತೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ರ‌್ಯಾಲಿ ನಗರದ ಕುಂಬಾರ ಓಣಿ, ಹನುಮಾನ ದೇವಸ್ಥಾನ, ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆತಡೆ ನಡೆಸಿದರು.

ತಡವಲಗಾದ ರೇಣುಕಾ ಶಿವಾಚಾರ್ಯರು ಮಾತನಾಡಿ, ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಾಗಿದೆ. ಸರ್ಕಾರ ರೈತ ವಿರೋಧಿ ಎಂದು ತೋರಿಸಿಕೊಟ್ಟಿದೆ. ರೈತರಿಗೆ ಕೊಟ್ಟಿರುವ ನೋಟಿಸ್ ಹಿಂಪಡೆಯಲು ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ. ಆದರೆ, ಪಹಣಿಯಿಂದ ವಕ್ಫ್ ಮಂಡಳಿ ಆಸ್ತಿ ಎಂದು ತೆಗೆಸಿಲ್ಲ. ಕೂಡಲೇ ಅದನ್ನು ತೆಗೆಸಬೇಕು ಎಂದು ಒತ್ತಾಯಿಸಿದರು.

ರೈತರ ಪಹಣಿಯಿಂದ ಎಲ್ಲಿಯವರೆಗೆ ವಕ್ಫ್ ಬೋರ್ಡ್ ಆಸ್ತಿ ಎಂದು ಬರೆದಿರುವುದು ತೆಗೆಯುವುದಿಲ್ಲವೋ ಅಲ್ಲಿಯವರೆಗೆ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.

ವಿಶ್ವ ಹಿಂದು ಪರಿಷತ್ ಜಿಲ್ಲಾ ಧರ್ಮಚಾರಿ ಸಂಪರ್ಕ ಪ್ರಮುಖ ಪ್ರಕಾಶ ಬಿರಾದಾರ ಮಾತನಾಡಿದರು. ಅಹಿರಸಂಗದ ಮಲ್ಲಿಕಾರ್ಜುನ ಶ್ರೀಗಳು, ವಿಶ್ವ ಹಿಂದು ಪರಿಷತ್ ತಾಲೂಕು ಉಪಾಧ್ಯಕ್ಷ ವಿಠ್ಠಲ ಹೊಸಮನಿ, ವಿಶ್ವ ಹಿಂದು ಪರಿಷತ್ ಸತ್ಸಂಗ ಪ್ರಮುಖ ಬಸವರಾಜ ಜಮಖಂಡಿ, ಮಹೇಶ ಪೂಜಾರಿ, ಸೋಮನಾಥ ಹುಣಸಗಿ, ರೇವಣಸಿದ್ಧ ಗುಣದಾಳ, ಪ್ರಶಾಂತ ಗೌಳಿ, ಸುನೀಲಗೌಡ ಬಿರಾದಾರ, ತುಳಜರಾಮ ಚವ್ಹಾಣ, ಈರಣ್ಣ ಸಿಂದಗಿ, ಶಾಂತಯ್ಯ ಪತ್ರಿಮಠ ಇತರರಿದ್ದರು.

ಪ್ರತಿಭಟನಾ ರ‌್ಯಾಲಿ ಮಾರ್ಗದುದ್ದಕ್ಕೂ ಸರ್ಕಾರಕ್ಕೆ ಧಿಕ್ಕಾರ ಕೂಗಿ ವಕ್ಫ್ ಹಟಾವೋ, ಕಿಸಾನ್ ಬಚಾವೋ ಎಂದು ಘೋಷಣೆಗಳನ್ನು ಹಾಕಿದರು.

Share This Article

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…

Health Tips: ನೆಲದ ಮೇಲೆ ಕುಳಿತುಕೊಂಡು ತಿನ್ನಲು ಸಾಧ್ಯವಿಲ್ಲವೇ? ಆದ್ರೆ ಈ ಅದ್ಭುತ ಪ್ರಯೋಜನಗಳೇನು ಗೊತ್ತಾ?

Health Tips: ನಮ್ಮ ಹಿರಿಯರು ಊಟ ಮಾಡುವಾಗ ನೆಲದ ಮೇಲೆ ಕಾಲು ಮಡಚಿ ಕೂರುತ್ತಿದ್ದರು. ಆಧುನಿಕ ಕಾಲದಲ್ಲಿ…

Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…