Wednesday, 12th December 2018  

Vijayavani

ಟ್ರಿನಿಟಿ ಸರ್ಕಲ್​​​ ಬಳಿ ಬಿರುಕು ಬಿಟ್ಟ ಪಿಲ್ಲರ್ - 10 ಕಿಮೀ ವೇಗದಲ್ಲಿ ಮೆಟ್ರೋ ಓಡಾಟ - ಸಮಸ್ಯೆ ಬಗೆಹರಿಸೋದಾಗಿ ಹೇಳಿದ ಸಿಎಂ        ಸದನದ ಹೊರಗೆ NPS ಆದೇಶ ಹಿನ್ನೆಲೆ - ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಸಿದ್ದತೆ -  ಸಂಕಷ್ಟ ತಂದ ಪೆನ್ಶನ್‌ ಸ್ಕೀಂ        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -  ರಾಜ್ಯಪಾಲರನ್ನು ಭೇಟಿಯಾಗಿ ಕಾಂಗ್ರೆಸ್ ಹಕ್ಕು ಮಂಡನೆ        ನಾಳೆ ಕೆಸಿಆರ್ ಪಟ್ಟಾಭಿಷೇಕ- ಪ್ರಮಾಣವಚನಕ್ಕೆ ಚಂದ್ರಶೇಖರ್ ರಾವ್ ಸಿದ್ಧತೆ - ರಾಜ್ಯಪಾಲರನ್ನು ಭೇಟಿಯಾದ ನಾಯಕ        ಶ್ರೀರಂಗಪಟ್ಟಣದಲ್ಲಿ ಶೂಟಿಂಗ್ ವೇಳೆ ಅವಾಂತರ - ಭರತ ಬಾಹುಬಲಿ ತಂಡದ ಮೇಲೆ ಹೆಜ್ಜೇನು ದಾಳಿ -ಏಳು ಮಂದಿ ಆಸ್ಪತ್ರೆಗೆ       
Breaking News

ಪಾಕ್‌ ನಟಿ, ಗಾಯಕಿಯನ್ನು ಗುಂಡಿಕ್ಕಿ ಕೊಂದ ಪತಿರಾಯ

Thursday, 09.08.2018, 11:05 AM       No Comments

ಖೈಬರ್‌ ಪಂಕ್ತುಕ್ವ: ಪಾಕಿಸ್ತಾನದ ನಟಿ ಮತ್ತು ಗಾಯಕಿ ರೇಷ್ಮಾ ಎಂಬಾಕೆಯನ್ನು ಪತಿಯೇ ಗುಂಡಿಕ್ಕಿ ಕೊಂದಿರುವ ಘಟನೆ ನೌಶೇರಾ ಕಲಾನ್‌ ಪ್ರದೇಶದಲ್ಲಿ ನಡೆದಿದೆ.

ಆರೋಪಿಯ ನಾಲ್ಕನೇ ಪತ್ನಿಯಾಗಿದ್ದ ರೇಶ್ಮಾ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯಿಂದ ದೂರವಾಗಿ ಹಾಕಿಮಾಬಾದ್‌ ಪ್ರದೇಶದಲ್ಲಿ ತನ್ನ ಸೋದರನ ಮನೆಯಲ್ಲಿ ವಾಸಿಸುತ್ತಿದ್ದಳು. ಈ ವೇಳೆ ಮನೆಗೆ ನುಗ್ಗಿದ ಆತ ಏಕಾ ಏಕಿ ಆಕೆಯ ಮೇಲೆ ಗುಂಡಿನ ಮಳೆಗರೆದಿದ್ದಾನೆ. ನಂತರ ಆರೋಪಿ ಪರಾರಿಯಾಗಿದ್ದಾನೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ವರ್ಷದಲ್ಲಿಯೇ ಪಾಕಿಸ್ತಾನದ ಖೈಬರ್‌ ಪಂಕ್ತುಕ್ವದಲ್ಲಿ ಮಹಿಳೆಯರ ವಿರುದ್ಧ ನಡೆದಿರುವ 15 ನೇ ಪ್ರಕರಣ ಇದಾಗಿದ್ದು, ಇಂಥದ್ದೇ ಪ್ರಕರಣದಲ್ಲಿ ಪಾರ್ಟಿಗೆ ಹೋಗಲು ನಿರಾಕರಿಸಿದ್ದಕ್ಕೆ ನಟಿ ಸುನ್ಬುಲ್‌ ಕೂಡ ಫೆ. 3ರಂದು ಗುಂಡೇಟಿಗೆ ಬಲಿಯಾಗಿದ್ದಳು.

ರೇಷ್ಮಾ ಪಾಕಿಸ್ತಾನದ ಪ್ರಸಿದ್ಧ ಧಾರವಾಹಿ ಜೋಬಲ್‌ ಗೋಲುನಲ್ಲಿ ನಟಿಸುತ್ತಿದ್ದರು. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top