More

    SCO ಸಭೆ; ಭಾರತಕ್ಕೆ ಭೇಟಿ ನೀಡಲಿರುವ ಪಾಕಿಸ್ತಾನ ವಿದೇಶಾಂಗ ಸಚಿವ

    ನವದೆಹಲಿ: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್​ ಭುಟ್ಟೋ ಜರ್ದಾರಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಲ್ಲಿಯ ವಕ್ತಾರರು ತಿಳಿಸಿದ್ಧಾರೆ.

    ಮೇ ತಿಂಗಳಲ್ಲಿ ಗೋವಾದಲ್ಲಿ ನಡೆಯಲಿರುವ ಶಾಂಘೈ ಶೃಂಗ ಸಭೆ(SCO)ಯಲ್ಲಿ ಭಾಗವಹಿಸಲು ಭುಟ್ಟೋ ಭಾರತಕ್ಕೆ ಭೇಟಿ ನೀಡಲಿದ್ಧಾರೆ ಎಂದು ತಿಳಿದು ಬಂದಿದೆ.

    ಶೃಂಗ ಸಭೆಯಲ್ಲಿ ಭಾಗಿಯಾಗಲು ಪ್ರವಾಸ

    ಪಾಕಿಸ್ತಾನ ವಿದೇಶಾಂಗ ಸಚಿವರಾದ ಬಿಲಾವಲ್​ ಭುಟ್ಟೋ ಜರ್ದಾರಿ ಭಾರತದ ಗೋವಾದಲ್ಲಿ ನಡೆಯಲಿರುವ ಶಾಂಘೈ ಶೃಂಗ ಸಭೆಯಲ್ಲಿ ಮೇ 4-5ರಂದು ಭಾಗಿಯಾಗಲಿದ್ದಾರೆ.

    ಇದನ್ನೂ ಓದಿ: ಮುಂದಿನ 15 ದಿನದೊಳಗೆ ಮಹತ್ವದ ರಾಜಕೀಯ ಬೆಳವಣಿಗೆ: ಸುಪ್ರಿಯ ಸುಲೆ

    ಸಭೆಯಲ್ಲಿ ನಮ್ಮ ದೇಶದ ಪ್ರತಿನಿಧಿ ಭಾಗಿಯಾಗುವುದರಿಂದ SCO ಬಗ್ಗೆ ಪಾಕಿಸ್ತಾನಕ್ಕೆ ಇರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಮುಮ್ತಾಜ್ ಜಹ್ರಾ​ ಬಲೋಚ್​ ತಿಳಿಸಿದ್ದಾರೆ.

    2014ರ ಬಳಿಕ ಭೇಟಿ

    2014ರಲ್ಲಿ ಪಾಕಿಸ್ತಾನದ ಅಂದಿನ ಪ್ರಧಾನಿಯಾಗಿದ್ದ ನವಾಜ್​ ಷರೀಫ್​ ಭೇಟಿ ಬಳಿಕ ಯಾವ ನಾಯಕರು ಭಾರತಕ್ಕೆ ಭೇಟಿ ನೀಡಿರಲಿಲ್ಲ.

    2016ರಲ್ಲಿ ಪಠಾಣ್​​​ಕೋಟ್​ ಸೇನಾ ನೆಲೆ ಮೇಲೆ ದಾಳಿ, 2019ರಲ್ಲಿ ಪುಲ್ವಾಮಾ ದಾಳಿ ಹಾಗೂ ಆಗಸ್ಟ್​ ತಿಂಗಳಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts