ನಮ್ಮ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ತೆರಳಿ ಎಂದು ಸೌದಿ ದೊರೆ ಔದಾರ್ಯ ತೋರಿದ್ದು ಯಾರಿಗೆ ಗೊತ್ತಾ?

Latest News

ಪುಟ್ನಂಜ ನಾಯಕಿಯ ಹೊಸ ಪ್ರಯತ್ನ: ಕಾಮಾಕ್ಷಿಯಾಗಿ ಬಂದ ಸ್ವಾತಿಮುತ್ತು ಮೀನ

ಬೆಂಗಳೂರು: ಒಂದು ಕಾಲದಲ್ಲಿ ಸಿನಿಪ್ರಿಯರ ಮನ ಗೆದ್ದ ನಟಿ ಮೀನಾ ಕರುನಾಡಿನಲ್ಲಿ ಮಾತ್ರವಲ್ಲದೆ, ಇಡೀ ದಕ್ಷಿಣ ಭಾರತದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ‘ಪುಟ್ನಂಜ’,...

17-11-2019ರಿಂದ 23-11-2019ರವರೆಗೆ

ಮೇಷ: ನಿಮ್ಮ ನಿರೀಕ್ಷೆಗಳು ತುಂಬಾ ಇವೆ. ಆದರೆ ಬುಧನ ಜತೆಗಿನ ನಿಮ್ಮ ರಾಶ್ಯಾಧಿಪ ಕುಜನ ಸಂಯೋಜನೆಯಿಂದಾಗಿ ಹಲವು ಮಹತ್ವದ ವಿಷಯಗಳು ನಿಮ್ಮ ನಿರೀಕ್ಷೆಯ...

ನಿತ್ಯ ಭವಿಷ್ಯ: ಈ ರಾಶಿಯವರಿಗೆ ಕೈಯಲ್ಲಿ ಏನೂ ಹಣವಿಲ್ಲ, ಏನು ಮಾಡುವುದು ಎಂಬ ದೊಡ್ಡ ಚಿಂತೆ ಪವಾಡಸದೃಶವಾಗಿ ದೂರವಾಗಲಿದೆ

ಮೇಷ: ಬರೀ ಗಾಳಿಯೊಡನೆ ಗುದ್ದಾಡಿ ಕೈ ನೋವು ಮಾಡಿಕೊಳ್ಳುವಂತಹ ಯುದ್ಧಕ್ಕಾಗಿನ ತಯಾರಿಯನ್ನು ಬಿಡಿ. ಶುಭಸಂಖ್ಯೆ: 2 ವೃಷಭ: ಬಹಳ ಹಿಂದೆ ಪ್ರಾರಂಭಿಸಿದ ಕೆಲಸವೊಂದು ಸದ್ಯದಲ್ಲೇ...

ರಾಷ್ಟ್ರಪತಿ ಆಳ್ವಿಕೆ ರಾಜಕೀಯ ಅಸ್ತ್ರ: ಯಾರ ಕಾಲದಲ್ಲಿ ಹೆಚ್ಚು ಬಳಕೆ ಎಂಬುದರ ಮಾಹಿತಿ ಇಲ್ಲಿದೆ

ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚಿಸಲು ವಿಫಲವಾದ್ದರಿಂದ ಅಲ್ಲಿ ಇತ್ತೀಚೆಗಷ್ಟೇ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಷ್ಟ್ರಪತಿ ಆಳ್ವಿಕೆ ಏಕೆ...

ವಿಜಯವಾಣಿ ಸಿನಿಮಾ ವಿಮರ್ಶೆ: ಸಸ್ಪೆನ್ಸ್ ಮಾತ್ರ ಸತ್ಯ ಮತ್ತೆಲ್ಲವೂ ಮಾಯ

ದುಡ್ಡಿಗಾಗಿ ಯುವತಿಯನ್ನು ಅಪಹರಿಸುವ ಖದೀಮರು ಹೇಗೆಲ್ಲ ಪ್ಲಾ್ಯನ್ ರೂಪಿಸುತ್ತಾರೆ ಮತ್ತು ಆ ಪ್ಲಾ್ಯನ್ ಫಲ ನೀಡುತ್ತೋ ಇಲ್ಲವೋ ಎಂಬುದನ್ನು ಇಟ್ಟುಕೊಂಡು ಈಗಾಗಲೇ ಹಲವು...

ಇಸ್ಲಾಮಾಬಾದ್​: ನೀವು ನಮ್ಮ ವಿಶೇಷ ಅತಿಥಿ. ಹಣ ಉಳಿಸಲು ಸಾಮಾನ್ಯ ವಿಮಾನದಲ್ಲಿ ತೆರಳದೆ ನಮ್ಮ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ತೆರಳಿ ಎಂದು ಹೇಳಿದ ಸೌದಿ ದೊರೆ ಮೊಹಮ್ಮದ್​ ಬಿನ್​ ಸಲ್ಮಾನ್​, ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ತಮ್ಮ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಪಾಕಿಸ್ತಾನ ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇತರರಿಗೆ ಮಾದರಿಯಾಗುವ ಬಯಕೆಯೊಂದಿಗೆ ವಿದೇಶಗಳಿಗೆ ತೆರಳುವಾಗ ವಿಶೇಷ ವಿಮಾನವನ್ನು ಬಿಟ್ಟು ಸಾಮಾನ್ಯ ವಿಮಾನಗಳಲ್ಲಿ ಪ್ರಯಾಣಿಸುವುದಾಗಿ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಘೋಷಿಸಿದ್ದರು. ಅದರಂತೆ ಅವರು ಕೆಲದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದಾಗ ಸಾಮಾನ್ಯ ವಿಮಾನದಲ್ಲೇ ಪ್ರಯಾಣಿಸಿದ್ದರು.

ಆದರೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ಅವರ ಗೌರವದ ಬಗ್ಗೆ ಚಿಂತಿತರಾಗಿದ್ದ ಸೌದಿ ದೊರೆ, ತಮ್ಮದೇ ವಿಶೇಷ ವಿಮಾನ ನೀಡಿ ಅದರ ಖರ್ಚುವೆಚ್ಚವನ್ನೆಲ್ಲಾ ತಾವೇ ಭರಿಸಿ ಇಮ್ರಾನ್​ ಅವರನ್ನು ಅಮೆರಿಕಕ್ಕೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

ಇಮ್ರಾನ್​ ಖಾನ್​ ಅಮೆರಿಕ ತಲುಪಿದ್ದನ್ನು ಖಚಿತಪಡಿಸಿರುವ ಪಾಕ್​ ವಿದೇಶಾಂಗ ಸಚಿವ ಶಾ ಮೆಹಮೂದ್​ ಖುರೇಶಿ, ಪ್ರಧಾನಿ ಇಮ್ರಾನ್​ ಖಾನ್​ 7 ದಿನ ಅಮೆರಿಕದ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ಜಾಗತಿಕವಾಗಿ ಗಮನಸೆಳೆಯುವ ಪ್ರಯತ್ನವನ್ನು ಮುಂದುವರಿಸಲಿದ್ದಾರೆ ಎಂದು ಹೇಳಿದರು.

ಕಾಶ್ಮೀರ ವಿಷಯವಾಗಿ ಇಸ್ಲಾಮಿಕ್​ ರಾಷ್ಟ್ರಗಳ ಬೆಂಬಲ ಪಡೆದುಕೊಳ್ಳುವ ಪ್ರಯತ್ನವಾಗಿ ಇಮ್ರಾನ್​ ಖಾನ್​ ಅಮೆರಿಕಕ್ಕೆ ತೆರಳುವ ಮುನ್ನ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದರು. 2 ದಿನ ಅಲ್ಲಿದ್ದ ಅವರು ವಿವಿಧ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು. ಅಲ್ಲಿಂದ ಅಮೆರಿಕ ತಲುಪಿರುವ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. (ಏಜೆನ್ಸೀಸ್​)

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....