

Ceasefire: ಕಳೆದ ಒಂದು ವಾರದಿಂದ ಭಾರತ-ಪಾಕಿಸ್ತಾನ ನಡುವೆ ಭಾರೀ ಉದ್ವಿಗ್ನತೆ ತೀವ್ರವಾದ ಬೆನ್ನಲ್ಲೇ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಹೇಳಿಕೊಂಡ ಕೆಲವೇ ಗಂಟೆಗಳ ಬಳಿಕ ಜಮ್ಮು ಮತ್ತು ಶ್ರೀನಗರದಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ಹಾಗೂ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಈ ಕುರಿತು ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. "ಕದನ ವಿರಾಮಕ್ಕೆ ಈಗ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳ ಶಬ್ದ ಕೇಳಿಬಂದಿದೆ!!!" ಎಂದು ಒಮರ್ ಅಬ್ದುಲ್ಲಾ ಬರೆದಿದ್ದಾರೆ.
ರಾಜಸ್ಥಾನದ ಬಾರ್ಮರ್ನಲ್ಲಿ ವಾಯುದಾಳಿ ಎಚ್ಚರಿಕೆಯನ್ನು ನೀಡಲಾಗಿದ್ದು, ಜಿಲ್ಲೆಯಲ್ಲಿ ತುರ್ತು ಬ್ಲಾಕ್ಔಟ್ ಜಾರಿ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುಡ್ಗಾಮ್ ಭಾಗದಲ್ಲೂ ಗುಂಡಿನ ಸದ್ದು ಕೇಳಿಬಂದಿದೆ ಎಂದು ವರದಿ ಉಲ್ಲೇಖಿಸಿದೆ.(ಏಜೆನ್ಸೀಸ್)