More

    ಭಾನುವಾರ ಇಂಗ್ಲೆಂಡ್‌ಗೆ ಪಾಕಿಸ್ತಾನ ತಂಡ

    ಲಂಡನ್: ಕರೊನಾ ವೈರಸ್ ಭೀತಿಯಿಂದಾಗಿ ನಿಂತ ನೀರಾಗಿದ್ದ ಕ್ರಿಕೆಟ್ ಚಟುವಟಿಕೆ ಹಂತ ಹಂತವಾಗಿ ಆರಂಭಗೊಳ್ಳುತ್ತಿದೆ. ಜೈವಿಕ ಸುರಕ್ಷತಾ ವಾತಾವರಣದಲ್ಲಿ ಕ್ರಿಕೆಟ್ ಆಡಿಸಲು ಇಂಗ್ಲೆಂಡ್‌ನಲ್ಲಿ ಈಗಾಗಲೇ ಸಿದ್ಧತೆ ನಡೆದಿದೆ. ವೆಸ್ಟ್ ಇಂಡೀಸ್ ತಂಡ ಈಗಾಗಲೇ ಇಂಗ್ಲೆಂಡ್‌ನಲ್ಲಿದ್ದು ಜುಲೈ 8 ರಿಂದ ಮೊದಲ ಟೆಸ್ಟ್ ಪಂದ್ಯವಾಡಲಿದೆ. ಇದೀಗ ಇಂಗ್ಲೆಂಡ್‌ಗೆ ಪಾಕಿಸ್ತಾನ ಎರಡನೇ ತಂಡವಾಗಿ ಪ್ರಯಾಣ ಬೆಳೆಸಲು ಸಜ್ಜಾಗಿದೆ. ಕರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ 10 ಆಟಗಾರರನ್ನು ಹೊರತುಪಡಿಸಿ ಪಾಕಿಸ್ತಾನ ತಂಡ ಭಾನುವಾರ ಇಂಗ್ಲೆಂಡ್‌ಗೆ ಪ್ರಯಾಣ ಬೆಳಸಲಿದೆ.

    ಇದನ್ನೂ ಓದಿ: ಸ್ಟಾರ್ ಟೇಬಲ್ ಟೆನಿಸ್ ಆಟಗಾರರ ಸಾಮಾಜಿಕ ಕಳಕಳಿ

    ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕರೊನಾ ವೈರಸ್ ಪರೀಕ್ಷೆಯಲ್ಲಿ ಪಾಕ್ ತಂಡ ಶಾಕ್ ಅನುಭವಿಸಿದೆ. ಮಹಾಮಾರಿ ಕೋವಿಡ್ ಪಾಕ್ ಆಟಗಾರರನ್ನು ಬಿಟ್ಟಿರಲಿಲ್ಲ. ಶನಿವಾರ ನಡೆಸಿದ ಮತ್ತೊಂದು ಪರೀಕ್ಷೆಯಲ್ಲಿ ಸೋಂಕಿಗೆ ಒಳಗಾಗಿದ್ದ 10 ಆಟಗಾರರ ಪೈಕಿ 6 ಆಟಗಾರರ ವರದಿ ನೆಗೆಟಿವ್ ಬಂದಿರುವುದು ಕೊಂಚ ನೆಮ್ಮದಿ ತರಿಸಿದೆ. ಇದೀಗ 10 ಮಂದಿಯೂ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಸಂಪೂರ್ಣ ಗುಣಮುಖರಾದ ಬಳಿಕವಷ್ಟೇ ತಂಡ ಸೇರ್ಪಡೆಗೊಳ್ಳಲಿದ್ದಾರೆ. ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ವೇಳಾಪಟ್ಟಿಯನ್ನು ಇನ್ನು ಅಂತಿಮವಾಗಿಲ್ಲ. ಸರಣಿಯಲ್ಲಿ ತಲಾ 3 ಟೆಸ್ಟ್, ಟಿ20 ಪಂದ್ಯಗಳ ಸರಣಿ ನಡೆಯಲಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ಇಸಿಬಿ) ಹೇಳಿದೆ.

    ಇದನ್ನೂ ಓದಿ:ಚೀನೀ ಕಾಂಚಾಣ ಕುಣಿಯುತ್ತಲಿದೆ..

    ಇಂಗ್ಲೆಂಡ್‌ಗೆ ಬಂದಿಳಿದ ತಕ್ಷಣವೇ ಪಾಕಿಸ್ತಾನ ತಂಡ ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಲಿದೆ. ಬಳಿಕ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಲಿದೆ. ಈಗಾಗಲೇ ಇಂಗ್ಲೆಂಡ್‌ನಲ್ಲಿರುವ ವೆಸ್ಟ್ ಇಂಡೀಸ್ ತಂಡ ಕ್ವಾರಂಟೈನ್ ಅವಧಿಯನ್ನು ಮುಕ್ತಾಯಗೊಳಿಸಿದ್ದು, ಜುಲೈ 8 ರಂದು ಮೊದಲ ಟೆಸ್ಟ್ ಪಂದ್ಯವಾಡಲಿದೆ.

    ಪಿಟಿ ಉಷಾ ಹುಟ್ಟುಹಬ್ಬಕ್ಕೆ ಶುಭಕೋರಿದ ಗಣ್ಯರು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts