25.5 C
Bangalore
Monday, December 16, 2019

ಬ್ರಿಸ್ಬೇನ್​ನಲ್ಲಿ ಸಿಡಿದ ಡೇವಿಡ್ ವಾರ್ನರ್, ಆಸೀಸ್​ಗೆ ಮುನ್ನಡೆ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಬ್ರಿಸ್ಬೇನ್: ಜೀವದಾನಗಳಿಂದ ಭರ್ಜರಿ ಲಾಭ ಗಿಟ್ಟಿಸಿಕೊಂಡ ಎಡಗೈ ಆರಂಭಿಕ ಡೇವಿಡ್ ವಾರ್ನರ್ (151* ರನ್, 265 ಎಸೆತ, 10 ಬೌಂಡರಿ) ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಪ್ರವಾಸಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆಯತ್ತ ಸಾಗಿದೆ.

- Advertisement -

ಪಾಕಿಸ್ತಾನದ 240 ರನ್​ಗೆ ಪ್ರತಿಯಾಗಿ ಆಸ್ಟ್ರೇಲಿಯಾ ತಂಡ 2ನೇ ದಿನದಂತ್ಯಕ್ಕೆ 1 ವಿಕೆಟ್​ಗೆ 312 ರನ್ ಗಳಿಸಿದ್ದು, 72 ರನ್ ಮುನ್ನಡೆ ಸಾಧಿಸಿದೆ. ವಾರ್ನರ್ ಜತೆಗೆ ಮಾರ್ನಸ್ ಲಬುಶೇನ್ (55*) ಕ್ರೀಸ್​ನಲ್ಲಿದ್ದಾರೆ.

ಚೆಂಡು ವಿರೂಪ ಪ್ರಕರಣದ ನಿಷೇಧ ಶಿಕ್ಷೆ ಮುಗಿಸಿ ವಾಪಸಾದ ಬಳಿಕ ಮೊದಲ ಟೆಸ್ಟ್ ಶತಕ ಬಾರಿಸಿದ ವಾರ್ನರ್, ಮೊದಲ ವಿಕೆಟ್​ಗೆ ಜೋ ಬರ್ನ್ಸ್ (97ರನ್, 166 ಎಸೆತ, 10 ಬೌಂಡರಿ) ಜತೆಗೆ 222 ರನ್ ಪೇರಿಸಿದರು. ಬರ್ನ್ಸ್ ಶತಕದಂಚಿನಲ್ಲಿ ಸ್ಪಿನ್ನರ್ ಯಾಸಿರ್ ಷಾಗೆ ವಿಕೆಟ್ ಒಪ್ಪಿಸಿದರು. ಬಳಿಕ ಲಬುಶೇನ್​ರಿಂದ ಉತ್ತಮ ಬೆಂಬಲ ಪಡೆದ ವಾರ್ನರ್, ಆಶಸ್ ಸರಣಿಯ 10 ಇನಿಂಗ್ಸ್​ಗಳಿಂದ ಕೇವಲ 95 ರನ್ ಗಳಿಸಿದ್ದರು. ಇದು ವಾರ್ನರ್ 22ನೇ ಮತ್ತು ಕಳೆದ 2 ವರ್ಷಗಳಲ್ಲಿ ಮೊದಲ ಟೆಸ್ಟ್ ಶತಕವಾಗಿದೆ. 2017ರ ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ವಾರ್ನರ್ ಕೊನೇ ಶತಕ ಸಿಡಿಸಿದ್ದರು.

ಪಾಕಿಸ್ತಾನ: 240, ಆಸ್ಟ್ರೇಲಿಯಾ: 87 ಓವರ್​ಗಳಲ್ಲಿ 1 ವಿಕೆಟ್​ಗೆ 312 (ವಾರ್ನರ್ 151*, ಬರ್ನ್ಸ್ 97, ಲಬುಶೇನ್ 55*, ಯಾಸಿರ್ 101ಕ್ಕೆ 1).

ವಾರ್ನರ್​ಗೆ ನೋಬಾಲ್ ಲಾಭ!

16ನೇ ವಯಸ್ಸಿನಲ್ಲೇ ಟೆಸ್ಟ್ ಪದಾರ್ಪಣೆ ಮಾಡಿರುವ ಪಾಕ್ ವೇಗಿ ನಸೀಮ್ ಷಾ, ಚೊಚ್ಚಲ ವಿಕೆಟ್ ವಿಕೆಟ್ ಆಗಿ ವಾರ್ನರ್​ರನ್ನು ಔಟ್ ಮಾಡುವ ಅವಕಾಶ ಕೈಚೆಲ್ಲಿದರು. ವಾರ್ನರ್ 56 ರನ್ ಗಳಿಸಿದ್ದಾಗ ನಸೀಮ್ ಎಸೆತದಲ್ಲಿ ಕೀಪರ್ ರಿಜ್ವಾನ್​ಗೆ ಕ್ಯಾಚ್ ನೀಡಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದ್ದರು. ಆದರೆ ಅದು ನೋಬಾಲ್ ಆಗಿದ್ದ ಕಾರಣ ನಸೀಮ್ ವಿಕೆಟ್ ವಂಚಿತರಾದರು. ಬಳಿಕ ವಾರ್ನರ್ 93 ರನ್ ಗಳಿಸಿದ್ದಾ ಗಲೂ ಕೂದಲೆಳೆಯ ಅಂತರದಲ್ಲಿ ರನೌಟ್​ನಿಂದ ಪಾರಾದರು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...