

ಭಾರತೀಯ ಕಾಲಮಾನದ ಪ್ರಕಾರ ಜುಲೈ 24ರವರೆಗೆ ವಿಧಿಸಿದ್ದ ನಿರ್ಬಂಧವನ್ನು ಆಗಸ್ಟ್ 24ರವರೆಗೆ ವಿಸ್ತರಿಸಲಾಗಿದೆ ಎಂದು ಪಿಎಎ ಖಚಿತಪಡಿಸಿದೆ.
ಲಾಹೋರ್; ಪಾಕಿಸ್ತಾನವು ತನ್ನ ವಾಯುಪ್ರದೇಶದ ಭಾರತೀಯ ವಿಮಾನಗಳ ಹಾರಾಟದ ಮೇಲಿನ ನಿಷೇಧವನ್ನು ಆಗಸ್ಟ್ 24 ರವರೆಗೆ ವಿಸ್ತರಿಸಿದೆ ಎಂದು ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (ಪಿಎಎ) ತಿಳಿಸಿದೆ.
ಕಾಶ್ಮೀರದ ಪಹಲ್ಲಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರ ಹತ್ಯೆಯ ಬಳಿಕ ರಾಜತಾಂತ್ರಿಕ ಸಂಬಂಧ ಕಳಚಿಕೊಂಡು ಭಾರತ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿತ್ತು. ಇದಕ್ಕೆ ಮರು ಉತ್ತರವಾಗಿ ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳಿಗೆ ನಿರ್ಬಂಧ ಹೇರಿರುವುದನ್ನೂ ಒಳಗೊಂಡು ಹಲವು ಕ್ರಮಗಳನ್ನು ಕೈಗೊಂಡಿತ್ತು.
ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಯಾವುದೇ ವಿಮಾನಗಳು, ಭಾರತದ ಒಡೆತನದ ಅಥವಾ ಗುತ್ತಿಗೆ ಪಡೆದ ಮಿಲಿಟರಿ ಮತ್ತು ನಾಗರಿಕ ವಿಮಾನಗಳು ಪಾಕಿಸ್ತಾನದ ವಾಯುಪ್ರದೇಶ ಬಳಸಲು ಅನುಮತಿಸಲಾಗುವುದಿಲ್ಲ ಎಂದು ಪಿಎಎ ಮಾಹಿತಿ ನೀಡಿದೆ.
(ಏಜೆನ್ಸೀಸ್)
ಈ ವಾಯುಪ್ರದೇಶ ನಿಷೇಧವು ಎರಡು ನೆರೆಯ ರಾಷ್ಟ್ರಗಳ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಎತ್ತಿ ತೋರಿಸುತ್ತದೆ. ಯಾವುದೇ ಪ್ರಗತಿ ಕಾಣದಿದ್ದರೂ, ಪ್ರಾದೇಶಿಕ ವಿಮಾನ ಮಾರ್ಗಗಳ ಮೇಲೆ ಪರಿಣಾಮ ಬೀರುತ್ತಿದೆ ಮತ್ತು ವಿಮಾನಯಾನ ಸಂಸ್ಥೆಗಳ ನಿರ್ವಹಣಾ ವೆಚ್ಚವನ್ನು ಹೆಚ್ಚಿಸುತ್ತಿದೆ.