More

    ಕಾಂಗ್ರೆಸ್ ರ‌್ಯಾಲಿಯಲ್ಲಿ ಪಾಕ್ ಧ್ವಜ, ಸುಳ್ಳು ಸುದ್ದಿ ಎಂಬುದು ಫ್ಯಾಕ್ಟ್ ಚೆಕ್‌ನಲ್ಲಿ ಪತ್ತೆ

    ತುಮಕೂರು: ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ರ‌್ಯಾಲಿ ವೇಳೆ ಪಾಕಿಸ್ತಾನದ ಧ್ವಜ ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ! ಆದರೆ, ಇದು ಸುಳ್ಳು ಸುದ್ದಿಯಾಗಿದ್ದು ಈ ರೀತಿ ಯಾವುದೇ ಘಟನೆ ನಡೆದಿಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದು ಫ್ಯಾಕ್ಟ್ ಚೆಕ್ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಸುದ್ದಿ ಎಂಬುದನ್ನು ಪತ್ತೆಹಚ್ಚಿದೆ. ಅಲ್ಲದೆ, ತುಮಕೂರಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ತುಮಕೂರಿನಲ್ಲಿ ಪಾಕಿಸ್ತಾನದ ಧ್ವಜ ಬೀಸಲಾಗಿದೆ ಎಂದು ಸುಳ್ಳು ಸುದ್ದಿ ವಿಡಿಯೋ ವೈರಲ್ ಮಾಡಿದವರ ವಿರುದ್ದ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಸುಳ್ಳು ಸುದ್ದಿ ಹರಡದಂತೆ ಎಚ್ಚರಿಕೆ ನೀಡಲಾಗಿದೆ

    ಘಟನೆ ನಡೆದಿಲ್ಲ: ಚುನಾವಣಾ ರ‌್ಯಾಲಿ ವೇಳೆ ಪಾಕ್ ಧ್ವಜ ಹಾರಿಸಿರುವ ಯಾವುದೇ ಘಟನೆ ತುಮಕೂರಿನಲ್ಲಿ ನಡೆದಿಲ್ಲ. ಚುನಾವಣಾ ಸಂದರ್ಭದಲ್ಲಿ ಸಮಾಜದ ಸ್ವಾಸ್ಥೃ ಹಾಳುವ ಮಾಡುವ ಉದ್ದೇಶ ಇದರ ಹಿಂದೆ ಇದೆ. ಪದೇಪದೇ ಇಂತಹ ವಿಡಿಯೋ ಹಂಚಿಕೊಂಡರೆ ಸೂಕ್ತ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಪ್ರಕಟಣೆಯಲ್ಲಿ ನೀಡಿದ್ದಾರೆ.

    ಮುರುಳಿ ಪುರುಷೋತ್ತಮ್ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ವಿಡಿಯೋ ಹಂಚಿಕೊಂಡು ‘ಇದು ತುಮಕೂರಿನ ಗುಬ್ಬಿ ಗೇಟ್ ಬಳಿ (ಚಂಬು) ಕಾಂಗ್ರೆಸ್ಸಿನ ಸಭೆಯಲ್ಲಿ ಕಂಡುಬಂದಂತಹ ಪಾಕಿಸ್ತಾನದ ಧಜ್ವ, ಇದಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಏನು ಹೇಳುತ್ತಾರೋ ಕಾದುನೋಡಬೇಕು? ರಾಜ್ಯದ ಮತದಾರರೇ ನೋಡಿ ಯೋಚಿಸಿ ನಿರ್ಧಾರ ತೆಗೆದುಕೊಂಡು ಮತಚಲಾಯಿಸಿ, ದೇಶದ ರಕ್ಷಣೆಗಾಗಿ ನಿಮ್ಮ ಮತ’ ಎಂದು ಪೋಸ್ಟ್ ಹಾಕಿದ್ದಾರೆ.

    ಪಾಕಿಸ್ತಾನ ಧ್ವಜ ಹಾರಿಸಿರುವ ಯಾವುದೇ ಈ ರೀತಿಯ ಘಟನೆಗಳು ತುಮಕೂರಿನಲ್ಲಿ ನಡೆದಿರುವುದಿಲ್ಲ. ಇದನ್ನು ಚುನಾವಣಾ ಸಮಾರಂಭದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಪೋಸ್ಟ್ ಹಂಚಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ.
    ಕೆ.ವಿ.ಅಶೋಕ್
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts