ನಟ ಸಲ್ಮಾನ್​ ಖಾನ್​ಗೆ 'ಭಯೋತ್ಪಾದಕ' ಪಟ್ಟ ಕಟ್ಟಿದ ಪಾಕ್​ ಸರ್ಕಾರ! | Terrorist

Bbau (66)
Published on

ಪಾಕಿಸ್ತಾನ: ಬಲೂಚಿಸ್ತಾನದ ಬಗ್ಗೆ ಬಾಲಿವುಡ್​ ನಟ ಸಲ್ಮಾನ್ ಖಾನ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಪಾಕಿಸ್ತಾನ ಸರ್ಕಾರದಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ನಟ ಸಲ್ಮಾನ್​ ಖಾನ್ ಅವರಿಗೆ ಭಯೋತ್ಪಾದಕ(Terrorist) ಎಂದು ಹಣೆಪಟ್ಟಿ ಕಟ್ಟಲಾಗಿದೆ ಎಂದು ಭಾನುವಾರ ವರದಿಯಾಗಿದೆ.

ಭಯೋತ್ಪಾದನಾ ಸಂಬಂಧಗಳ ಶಂಕಿತ ವ್ಯಕ್ತಿಗಳ ಕಪ್ಪುಪಟ್ಟಿಯಲ್ಲಿ ನಟನನ್ನುಪಾಕಿಸ್ತಾನದ 1997ರ ಭಯೋತ್ಪಾದನಾ ವಿರೋಧಿ ಕಾಯ್ದೆಯ 4 ನೇ ಅಡಿಯಲ್ಲಿ ಸೇರಿಸಲಾಗಿದೆ. ಇದು ಕಟ್ಟುನಿಟ್ಟಾದ ಕಣ್ಗಾವಲು, ಚಲನೆಯ ನಿರ್ಬಂಧಗಳು ಮತ್ತು ಸಂಭಾವ್ಯ ಕಾನೂನು ಕ್ರಮಗಳಿಗೆ ಒಳಪಟ್ಟಿರುತ್ತದೆ ಎಂದು ವರದಿ ಉಲ್ಲೇಖಿಸಿದೆ.

ನಟ ಸಲ್ಮಾನ್ ಖಾನ್ ಹೇಳಿದ್ದೇನು?

ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಅವರೊಂದಿಗೆ ಮಧ್ಯಪ್ರಾಚ್ಯದಲ್ಲಿ ಭಾರತೀಯ ಸಿನಿಮಾದ ಹೆಚ್ಚುತ್ತಿರುವ ಆಕರ್ಷಣೆಯ ಬಗ್ಗೆ ಮಾತನಾಡುವಾಗ "ಈಗ, ನೀವು ಹಿಂದಿ ಸಿನಿಮಾ ಮಾಡಿ ಇಲ್ಲಿ (ಸೌದಿ ಅರೇಬಿಯಾದಲ್ಲಿ) ಬಿಡುಗಡೆ ಮಾಡಿದರೆ, ಅದು ಸೂಪರ್ ಹಿಟ್ ಆಗುತ್ತದೆ. ನೀವು ತಮಿಳು, ತೆಲುಗು ಅಥವಾ ಮಲಯಾಳಿ ಸಿನಿಮಾ ಮಾಡಿದರೆ, ನೂರಾರು ಕೋಟಿ ವ್ಯವಹಾರ ಮಾಡುತ್ತದೆ ಏಕೆಂದರೆ ಇತರ ದೇಶಗಳಿಂದ ಇಲ್ಲಿಗೆ ಅನೇಕ ಜನರು ಬಂದಿದ್ದಾರೆ. ಬಲೂಚಿಸ್ತಾನದ ಜನರಿದ್ದಾರೆ, ಅಫ್ಘಾನಿಸ್ತಾನದ ಜನರಿದ್ದಾರೆ, ಪಾಕಿಸ್ತಾನದ ಜನರಿದ್ದಾರೆ... ಎಲ್ಲರೂ ಇಲ್ಲಿ ಕೆಲಸ ಮಾಡುತ್ತಿದ್ದಾರೆ." ಎಂದು ಹೇಳಿದ್ದಾರೆ.

ಸಲ್ಮಾನ್ ಖಾನ್ ಅವರ ಹೇಳಿಕೆ ಪಾಕಿಸ್ತಾನ ಸರ್ಕಾರವನ್ನು ಕೆರಳಿಸಿದೆ. ಆದಾಗ್ಯೂ, ಬಲೂಚ್ ಪ್ರತ್ಯೇಕತಾವಾದಿ ನಾಯಕರು ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net