18.5 C
Bangalore
Monday, December 16, 2019

ಪಾಕ್ ಹಜ್ ಸಬ್ಸಿಡಿ ಬಂದ್

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಇಸ್ಲಾಮಾಬಾದ್: ಮುಸ್ಲಿಮರ ಪವಿತ್ರ ಕ್ಷೇತ್ರ ಮೆಕ್ಕಾ ಮತ್ತು ಮದೀನಾಕ್ಕೆ ಹಜ್ ಯಾತ್ರೆ ಕೈಗೊಳ್ಳುವವರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಪಾಕಿಸ್ತಾನ ಸರ್ಕಾರ ರದ್ದು ಮಾಡಿದೆ. ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ವಾರ್ಷಿಕವಾಗಿ -ಠಿ;450 ಕೋಟಿ (ಪಾಕ್ ಕರೆನ್ಸಿ) ಉಳಿತಾಯವಾಗಲಿದೆ.

ಪಾಕಿಸ್ತಾನದ ಆರ್ಥಿಕ ಸ್ಥಿತಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡುವುದಕ್ಕೆ ಇಸ್ಲಾಂನಲ್ಲಿ ಅವಕಾಶ ಇದೆಯೆ ಅಥವಾ ಇಲ್ಲವೆ ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು ಎಂದು ಧಾರ್ವಿುಕ ಮತ್ತು ಅಂತರ್ ಧರ್ವಿುಯ ಸೌಹಾರ್ದ ಸಚಿವ ನೂರುಲ್ ಹಕ್ ಖಾದ್ರಿ ತಿಳಿಸಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದ ಪಿಎಂಎಲ್-ಎನ್ ಪಕ್ಷ ಸರ್ಕಾರಿ ಕೋಟಾದಲ್ಲಿ ಹಜ್ ಯಾತ್ರೆ ಕೈಗೊಳ್ಳುವವರಿಗೆ 42 ಸಾವಿರ ರೂ. ಸಬ್ಸಿಡಿ ನೀಡುತ್ತಿತ್ತು. -ಏಜೆನ್ಸೀಸ್

ಎಷ್ಟು ಖರ್ಚು ಬರುತ್ತೆ?
ಹಜ್ ಯಾತ್ರೆ ಕೈಗೊಳ್ಳಲು ಸರಾಸರಿ 4600 ಡಾಲರ್ (ಸುಮಾರು -ಠಿ; 3 ಲಕ್ಷ) ಖರ್ಚಾಗುತ್ತದೆ. ಸೌದಿಯ ವಿವಿಧ ಭಾಗಗಳಿಂದಲೇ ಹಜ್​ಗೆ ಆಗಮಿ ಸುವ ಯಾತ್ರಿಕರಿಗೆ ಸರಾಸರಿ 1,500 ಡಾಲರ್ (ಸುಮಾರು -ಠಿ; 1 ಲಕ್ಷ) ವೆಚ್ಚವಾಗುತ್ತದೆ. ಇರಾನ್, ಪಾಕಿಸ್ತಾನ, ಬಾಂಗ್ಲಾದೇಶದಿಂದ ಆಗಮಿಸುವ ಯಾತ್ರಿಕರಿಗೆ 3000 ಡಾಲರ್ (-ಠಿ; 2 ಲಕ್ಷ) ಖರ್ಚು ಬರುತ್ತದೆ.

ಭಾರತದಲ್ಲಿ ಸಬ್ಸಿಡಿ ಇತಿಹಾಸ
ಭಾರತದಲ್ಲಿ ಕೇಂದ್ರ ಸರ್ಕಾರ ಮುಸ್ಲಿಮರಿಗೆ ಹಜ್ ಯಾತ್ರೆ ಕೈಗೊಳ್ಳಲು ವಿಮಾನ ಪ್ರಯಾಣ ದರದಲ್ಲಿ ಸಬ್ಸಿಡಿ ರೂಪದಲ್ಲಿ ಭಾರಿ ರಿಯಾಯಿತಿ ನೀಡುತ್ತ ಬಂದಿದೆ. ಹಜ್ ಯಾತ್ರೆಗೆ ಸಬ್ಸಿಡಿ ನೀಡುವ ಕ್ರಮ ಆರಂಭವಾಗಿದ್ದು ಬ್ರಿಟಿಷ್ ವಸಾಹತು ಕಾಲದಲ್ಲಿ. ಬ್ರಿಟಿಷ್ ಸರ್ಕಾರ 1932ರಲ್ಲಿ ಪೋರ್ಟ್ ಹಜ್ ಕಮಿಟಿಸ್ ಆಕ್ಟ್ ರೂಪಿಸಿತ್ತು. ಸ್ವಾತಂತ್ರ್ಯದ ಬಳಿಕ ಅಧಿಕಾರಕ್ಕೆ ಬಂದ ಸರ್ಕಾರಗಳು ಈ ನೀತಿಯನ್ನೇ ಮುಂದುವರಿಸಿ ಕೊಂಡು ಹೋದವು. 1954ರಲ್ಲಿ ಮುಂಬೈ-ಜೆಡ್ಡಾ ನಡುವೆ ನೇರ ವಿಮಾನ ಯಾನ ಆರಂಭಿಸಿ, ರಿಯಾಯಿತಿ ದರದಲ್ಲಿ ಹಜ್ ಯಾತ್ರಿಕರ ಪ್ರಯಾಣಕ್ಕೆ ಅವಕಾಶ ಕಲ್ಪಿಸ ಲಾಯಿತು. 2000ನೇ ವರ್ಷದಿಂದ ಈಚೆಗೆ 1.50 ಕೋಟಿ ಮುಸಲ್ಮಾನರು ಈ ಸಬ್ಸಿಡಿಯ ಲಾಭ ಪಡೆದಿದ್ದಾರೆ. 2008ರಿಂದ ಈವರೆಗೆ ವರ್ಷಕ್ಕೆ ಸರಾಸರಿ 1.20 ಲಕ್ಷ ಯಾತ್ರಿಗಳು ಸಬ್ಸಿಡಿ ಪಡೆದುಕೊಂಡಿದ್ದಾರೆ. ಅಂಕಿಅಂಶಗಳ ಪ್ರಕಾರ ಪ್ರತಿ ಯಾತ್ರಾರ್ಥಿಗೆ ಸರಾಸರಿ -ಠಿ; 73,526 ಸಬ್ಸಿಡಿ ದೊರೆತಿದೆ.

ಬಹುತೇಕ ಇಸ್ಲಾಂ ರಾಷ್ಟ್ರಗಳಲ್ಲಿ ಇಲ್ಲ ಹಜ್ ಸಬ್ಸಿಡಿ ಸೌಲಭ್ಯ
ಹಜ್ ಯಾತ್ರಿಗಳು ಅಗತ್ಯ ಆರ್ಥಿಕ ಸಂಪನ್ಮೂಲವನ್ನು ತಮ್ಮ ದುಡಿಮೆಯಿಂದಲೇ ಒದಗಿಸಿಕೊಳ್ಳಬೇಕು. ಧನ ಸಹಾಯ ಪಡೆಯುವುದು ಧರ್ಮಬಾಹಿರ ಎಂದು ಇಸ್ಲಾಂನ ಅನೇಕ ಮೌಲ್ವಿ ಗಳು ಹೇಳಿದ್ದಾರೆ. ಹೀಗಾಗಿ ಜಗತ್ತಿನ ಬಹುತೇಕ ಇಸ್ಲಾಂ ರಾಷ್ಟ್ರಗಳಲ್ಲಿ ಹಜ್ ಸಬ್ಸಿಡಿ ನೀಡುವುದಿಲ್ಲ.

ಭಾರತದಲ್ಲಿ ಹಂತ ಹಂತವಾಗಿ ರದ್ದು…
ಭಾರತದಲ್ಲಿ ಹಜ್ ಸಬ್ಸಿಡಿ ನಿಲ್ಲಿಸುವಂತೆ ಸುಪ್ರೀಂಕೋರ್ಟ್ 2012 ರಲ್ಲಿ ತೀರ್ಪು ನೀಡಿತ್ತು. ಆದರೆ, ಜಾರಿಯಾಗಿರಲಿಲ್ಲ. ಕಳೆದ ವರ್ಷ ಜನವರಿ ಯಲ್ಲಿ ಕೇಂದ್ರ ಸರ್ಕಾರ ಹಜ್ ಸಬ್ಸಿಡಿಯನ್ನು ಹಂತ ಹಂತವಾಗಿ ರದ್ದು ಮಾಡುವ ನಿರ್ಧಾರ ಕೈಗೊಂಡಿತ್ತು. 2022ಕ್ಕೆ ಸಂಪೂರ್ಣವಾಗಿ ಇದು ಸ್ಥಗಿತಗೊಳ್ಳಲಿದೆ. ಹಜ್ ಸಬ್ಸಿಡಿಗೆ ನೀಡುತ್ತಿದ್ದ ಅನುದಾನವನ್ನು ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಸಬಲೀಕರಣಕ್ಕೆ ವಿನಿಯೋಗಿಸಲಾಗುವುದು ಎಂದು ಅಲ್ಪಸಂಖ್ಯಾತರ ವ್ಯವಹಾರ ಖಾತೆ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದರು. ಇದರಿಂದ ವಾರ್ಷಿಕ -ಠಿ; 700 ಕೋಟಿಗೂ ಹೆಚ್ಚು ಉಳಿತಾಯವಾಗಲಿದೆ. 2018ರಲ್ಲಿ 1.75 ಲಕ್ಷ ಜನರು ಹಜ್ ಯಾತ್ರೆ ಕೈಗೊಂಡಿದ್ದರು.

ಹಜ್ ಯಾತ್ರೆ ಪ್ರಮುಖ ಕರ್ತವ್ಯ
ಇಸ್ಲಾಂ ಧರ್ಮದಲ್ಲಿ ಪ್ರತಿಯೊಬ್ಬರೂ ನಿಭಾಯಿಸಬೇಕಾದ ಐದು ಪ್ರಮುಖ ಕರ್ತವ್ಯಗಳ ಪೈಕಿ ಹಜ್ ಯಾತ್ರೆ ಕೂಡ ಒಂದು. ಇಸ್ಲಾಂನ ಪ್ರಮುಖ ಸ್ತಂಭಗಳಲ್ಲಿ ಹಜ್ ಯಾತ್ರೆಗೆ ಸ್ಥಾನ ನೀಡಲಾಗಿದೆ. ಪ್ರತಿಯೊಬ್ಬ ಮುಸಲ್ಮಾನ ನಮಾಜ್ ಮತ್ತು ರೋಜಾವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆಯೇ ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆಯನ್ನು ಕೈಗೊಳ್ಳಬೇಕು. ಪ್ರಯಾಣ, ವಸತಿ, ಆಹಾರದ ಖರ್ಚನ್ನು ಯಾತ್ರಿಕರು ಸ್ವಂತವಾಗಿ ಭರಿಸಬೇಕು ಎಂಬ ಉಲ್ಲೇಖ ಕುರಾನ್​ನಲ್ಲಿ ಇದೆ ಎಂಬುದು ಇಸ್ಲಾಂ ಧಾರ್ವಿುಕ ಮುಖಂಡರ ಅಭಿಪ್ರಾಯ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...