ಪಾಕಿಸ್ತಾನ ಎಲ್ಲಾ ರಾಷ್ಟ್ರಗಳಿಗೆ ಆತಿಥ್ಯ ವಹಿಸುತ್ತಿದೆ ಆದರೆ...Team India ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ ಮಾಜಿ ಕೋಚ್​

India Pakistan
Published on

ನವದೆಹಲಿ: 2025ರ ಫೆಬ್ರವರಿ 19ರಿಂದ ಮಾರ್ಚ್​ 09ರವರೆಗೆ ಪಾಕಿಸ್ತಾನದ ನಡೆಯಲಿರುವ ಚಾಂಪಿಯನ್ಸ್​ ಟ್ರೋಫಿಗೆ (Champions Trophy) ಸಂಬಂಧಿಸಿದಂತೆ ಈಗಾಗಲೇ ಒಂದಿಲ್ಲೊಂದು ಸುದ್ದಿಗಳು ಕ್ರೀಡಾವಲಯದಲ್ಲಿ ಸಖತ್​ ಸೌಂಡ್​ ಮಾಡುತ್ತಿದ್ದು, ಮುಖ್ಯವಾಗಿ ಭಾರತ (Team India) ಹಾಗೂ ಪಾಕಿಸ್ತಾನ (Pakistan) ನಡುವಿನ ಕಿತ್ತಾಟದಿಂದಾಗಿ ಹೆಚ್ಚು ಸದ್ದು ಮಾಡುತ್ತಿದೆ. ಈಗಾಗಲೇ ಬಿಸಿಸಿಐ (BCCI) ಭದ್ರತೆಯ ಕಾರಣ ನೀಡಿ ತನ್ನ ಆಟಗಾರರನ್ನು ಪಾಕ್​ಗೆ ಕಳುಹಿಸುವುದಿಲ್ಲ ಎಂದು ಹೇಳಿದ್ದು, ಹೈಬ್ರಿಡ್​ ಮಾದರಿಯಲ್ಲಿ ಟೂರ್ನಿ ನಡೆಸಿದರೆ ಮಾತ್ರ ಭಾರತ ಭಾಗಿಯಾಗುವುದಾಗಿ ಷರತ್ತು ವಿಧಿಸಿದೆ. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯು (Pakistan Cricket Board) ಐಸಿಸಿ (ICC) ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದೆ.

ಇಷ್ಟು ದಿನ ಚಾಂಪಿಯನ್ಸ್​ ಟ್ರೋಫಿಗೆ (Champions Trophy) ಸಂಬಂಧಿಸಿದಂತೆ ಭಾರತ ಭಾಗಿಯಾಗಬೇಕೆಂದು ಆಶಾಭಾವನೆ ವ್ಯಕ್ತಪಡಿಸುತ್ತಿದ್ದ ಪಾಕಿಸ್ತಾನ ಕ್ರಿಕೆಟ್​ ಮಂಡಳಿ (Pakistan Cricket Board) ಹಾಗೂ ಅಲ್ಲಿನ ಮಾಜಿ ಆಟಗಾರರು ಇದೀಗ ತಮ್ಮ ವರಸೆಯನ್ನು ಬದಲಾಯಿಸಿದ್ದು, ಭಾರತದ ವಿರುದ್ದ ಹೇಳಿಕೆಗಳನ್ನು ನೀಡಲು ಶುರು ಮಾಡಿದ್ದಾರೆ. ಇದೀಗ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಕೋಚ್​ ಮೊಹಮ್ಮದ್​ ಹಫೀಜ್​ (Mohammed Hafeez) ಭಾರತ ಭಾಗಿಯಾಗದಿರುವ ಬಗ್ಗೆ ಹೇಳಿಕೆಯನ್ನು ನೀಡಿದ್ದು, ಈ ಬಗ್ಗೆ ಟ್ವೀಟ್​ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಹಫೀಜ್​ (Mohammed Hafeez), ಭಾರತ ಚಾಂಪಿಯನ್ಸ್​ ಟ್ರೋಫಿ (Champions Trophy) ಆಡಲು ಪಾಕಿಸ್ತಾನಕ್ಕೆ ಬರುತ್ತದೆ ಎನ್ನುವುದು ನಮ್ಮೆಲ್ಲರ ಹಗಲುಗನಸು. ಪಾಕಿಸ್ತಾನವು ಸುರಕ್ಷಿತವಾಗಿದೆ ಮತ್ತು ಈವೆಂಟ್ ಅನ್ನು ಆಯೋಜಿಸಲು ಸಿದ್ಧವಾಗಿದೆ. ಪಾಕಿಸ್ತಾನದಲ್ಲಿ ಎಲ್ಲಾ ರಾಷ್ಟ್ರಗಳನ್ನು ಒಳಗೊಂಡಂತೆ ತವರಿನಲ್ಲಿ ಟೂರ್ನಿಯನ್ನು ಆಯೋಜಿಸುತ್ತಿದ್ದರು ಭಾರತಕ್ಕೆ (Team India) ಇದು ಸುರಕ್ಷಿತವಲ್ಲ. ಸರ್ಕಾರ ಮತ್ತು ಪಿಸಿಬಿಯಿಂದ ಸೂಕ್ತ ಪ್ರತಿಕ್ರಿಯೆಗಾಗಿ ಕಾಯಲಾಗುತ್ತಿದೆ ಎಂದು ಮೊಹಮ್ಮದ್​ ಹಫೀಜ್​ (Mohammed Hafeez) ಟ್ವೀಟ್​ ಮಾಡಿದ್ದಾರೆ. 

Champions Trophy

ಭದ್ರತಾ ದೃಷ್ಟಿಯಿಂದ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿತ್ತು. ಬಳಿಕ ದುಬೈನಲ್ಲಿ (Dubai) ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯ ನಡೆಸುವ ಬಗ್ಗೆ ಪ್ರಸ್ತಾಪವಾಗಿತ್ತು. ಐಸಿಸಿ (iCC) ಪ್ರಸ್ತಾವನೆಯನ್ನು ಪಾಕಿಸ್ತಾನ ನಿರಾಕರಿಸಿದ್ದು, ಭಾರತ ಬರಲಿ ಬಾರದೇ ಇರಲಿ ನಾವು ಟೂರ್ನಿಯನ್ನು ಆಯೋಜಿಸುತ್ತೇವೆ ಎಂದು ಹೇಳಿದೆ. ಈಗಾಗಲೇ ಟಿವಿ ರೈಟ್ಸ್‌ ಮಾರಾಟವಾಗಿರುವ ಕಾರಣ ಭಾರತ ತಂಡ ಒಂದು ವೇಳೆ ಭಾಗವಹಿಸದೇ ಇದ್ದರೆ ಐಸಿಸಿಗೆ (ICC) ಭಾರೀ ನಷ್ಟವಾಗಲಿದೆ. ಹೀಗಾಗಿ ಐಸಿಸಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ (Rahul Dravid) ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ನಂತರ ರಾಜತಾಂತ್ರಿಕ ಕಾರಣಗಳಿಂದಾಗಿ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net