ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ಗೆ ನೊಬೆಲ್​ ಶಾಂತಿ ಪ್ರಶಸ್ತಿ ನೀಡಲು ಪ್ರಸ್ತಾವನೆ

ಇಸ್ಲಾಮಾಬಾದ್​: ಪಾಕಿಸ್ತಾನ ಸೈನ್ಯ ಬಂಧಿಸಿದ್ದ ಭಾರತದ ವಿಂಗ್​ ಕಮಾಂಡರ್ ಅಭಿನಂದನ್​ ವರ್ಧಮಾನ್​ ಅವರನ್ನು ಶಾಂತಿ ಸಂಕೇತವಾಗಿ ಬಿಡುಗಡೆ ಮಾಡಿದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು ಎಂದು ಅಲ್ಲಿನ ನಾಗರಿಕರು ಒತ್ತಾಯ ಮಾಡುತ್ತಿರುವುದಲ್ಲದೆ, ಶನಿವಾರ ಸಂಸತ್ತಿನಲ್ಲೂ ನಿರ್ಣಯ ಮಂಡಿಸಲಾಯಿತು.

ಮಾಹಿತಿ ಸಚಿವ ಫವದ್​ ಔಧರಿ ಶನಿವಾರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಸ್ತಾವನೆ ಮುಂದಿಟ್ಟಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಬಿಕ್ಕಟ್ಟು ಶಮನ ಮಾಡಿ ಶಾಂತಿ ಸ್ಥಾಪನೆಗಾಗಿ ಇಮ್ರಾನ್​ ಖಾನ್​ ಭಾರತೀಯ ವಿಂಗ್​ ಕಮಾಂಡರ್​ನನ್ನು ಬಿಡುಗಡೆ ಮಾಡಿದ್ದಾರೆ. ಹಾಗಾಗಿ ಅವರು ನೊಬೆಲ್​ ಶಾಂತಿ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಸೋಮವಾರ ಪಾಕ್​ ಸಂಸತ್ತಿನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಈ ಪ್ರಸ್ತಾವನೆ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *