ನಮ್ಮ ಬಗ್ಗೆ ಮಾತನಾಡುವ ಮಟ್ಟದಲ್ಲಿ ನೀವಿಲ್ಲ… ಪಾಕಿಸ್ತಾನಕ್ಕೆ ಖಡಕ್​ ತಿರುಗೇಟು ಕೊಟ್ಟ ಭಾರತ! India

India

India : ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತ ತನ್ನ ನೆರೆಯ ಪಾಕಿಸ್ತಾನಕ್ಕೆ ಮತ್ತೊಮ್ಮೆ ಬಲವಾದ ಪ್ರತ್ಯುತ್ತರವನ್ನು ನೀಡಿದೆ. ಜಮ್ಮು ಮತ್ತು ಕಾಶ್ಮೀರ ವಿಷಯದ ಕುರಿತು ಪಾಕಿಸ್ತಾನ ಮಾಡುತ್ತಿರುವ ಆರೋಪಗಳನ್ನು ಭಾರತ ಮತ್ತೊಮ್ಮೆ ನಿರಾಕರಿಸಿದೆ. ಅಲ್ಲದೆ, ಭಾರತಕ್ಕೆ ಪಾಠ ಹೇಳುವ ಮಟ್ಟದಲ್ಲಿ ಪಾಕಿಸ್ತಾನ ಇಲ್ಲ ಎನ್ನುವ ಮೂಲಕ ಖಡಕ್​ ತಿರುಗೇಟು ನೀಡಿದೆ. ಭಾರತದ ವಿರುದ್ಧ ಸುಮ್ಮನೇ ಆರೋಪಗಳನ್ನು ಮಾಡುವುದನ್ನು ನಿಲ್ಲಿಸಿ, ತಮ್ಮ ದೇಶದ ಜನರಿಗೆ ಉತ್ತಮ ಆಡಳಿತ ನೀಡುವತ್ತ ಗಮನಹರಿಸುವಂತೆ ಪಾಕಿಸ್ತಾನಕ್ಕೆ ಚಾಟಿ ಬೀಸಿದೆ.

ಪಾಕಿಸ್ತಾನವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ವಿರುದ್ಧ ಪದೇಪದೆ ದೂರು ನೀಡುತ್ತಿದೆ. ಇತ್ತೀಚೆಗೆ, ಪಾಕಿಸ್ತಾನ ಮತ್ತೊಮ್ಮೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಎತ್ತಿದೆ. ಜಿನೀವಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನದ ಕಾನೂನು ಮತ್ತು ಮಾನವ ಹಕ್ಕುಗಳ ಸಚಿವ ಅಜಮ್ ನಜೀರ್ ತರಾರ್, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ದಮನಿಸಲಾಗುತ್ತಿದೆ ಮತ್ತು ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ, ಭಾರತವು ಪಾಕಿಸ್ತಾನದ ಹೇಳಿಕೆಗಳಿಗೆ ಬಲವಾದ ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿ: ನನ್ನ ಮಕ್ಕಳು ಐಸಿಸ್​ಗೆ​ ಸೇರ್ತಾರೆ ಅಂತಾರೆ… ಈಗಲೂ ಅದು ಮುಂದುವರಿದಿದೆ ಎನ್ನುತ್ತಾ ಕಣ್ಣೀರಿಟ್ಟ ಪ್ರಿಯಾಮಣಿ! Priyamani

ಪಾಕಿಸ್ತಾನದ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಭಾರತೀಯ ರಾಯಭಾರಿ ಕ್ಷಿತಿಜ್ ತ್ಯಾಗಿ, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಲ್ಪಸಂಖ್ಯಾತರ ಮೇಲಿನ ಕಿರುಕುಳ ಸೇರಿದಂತೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪಾಲಿಸದ ಪಾಕಿಸ್ತಾನವು ಭಾರತಕ್ಕೆ ಉಪನ್ಯಾಸ ನೀಡುವ ಮಟ್ಟದಲ್ಲಿಲ್ಲ. ಭಾರತ ಪ್ರಜಾಪ್ರಭುತ್ವ ಪ್ರಗತಿ ಮತ್ತು ತನ್ನ ಜನರ ಮೇಲಿನ ಗೌರವದ ಮೇಲೆ ಕೇಂದ್ರೀಕರಿಸುತ್ತದೆ. ಪಾಕಿಸ್ತಾನ ನಮ್ಮ ವಿರುದ್ಧ ಆರೋಪ ಮಾಡುವುದನ್ನು ನಿಲ್ಲಿಸಿ ತನ್ನದೇ ದೇಶದ ಜನರಿಗೆ ಉತ್ತಮ ಆಡಳಿತ ನೀಡುವತ್ತ ಗಮನಹರಿಸಬೇಕು ಎಂದರು.

ಮಾತು ಮುಂದುವರಿಸಿದ ತ್ಯಾಗಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿವೆ. ದಶಕಗಳಿಂದ ಪಾಕಿಸ್ತಾನಿ ಭಯೋತ್ಪಾದನೆಯಿಂದ ಪ್ರಭಾವಿತವಾಗಿರುವ ಆ ಪ್ರದೇಶಗಳಲ್ಲಿ ಸಾಮಾನ್ಯ ಸ್ಥಿತಿ ತರಲು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ವಿಶ್ವಸಂಸ್ಥೆಯ ಪಟ್ಟಿಯಲ್ಲಿರುವ ಹಲವಾರು ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ಆಶ್ರಯ ನೀಡುತ್ತದೆ. ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಸಮಯವನ್ನು ವ್ಯರ್ಥ ಮಾಡುತ್ತಿರುವುದು ದುರದೃಷ್ಟಕರ ಸಂಗತಿ ಎನ್ನುವ ಮೂಲಕ ತ್ಯಾಗಿ ಅವರು ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದರು. (ಏಜೆನ್ಸೀಸ್​)

ಇನ್ನು ಎಲ್ರಿಗೂ ಸಿಗುತ್ತೆ ಪೆನ್ಶನ್; ಸಾರ್ವತ್ರಿಕ ಪಿಂಚಣಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ

ಇದುವರೆಗೂ ನೋಡದ ಬೋಲ್ಡ್​ ಅವತಾರದಲ್ಲಿ ಶ್ರುತಿ ಹಾಸನ್​! ಹಾಲಿವುಡ್​ ಚಿತ್ರದ ಟ್ರೈಲರ್​ನಲ್ಲಿ ಹಸಿಬಿಸಿ ದೃಶ್ಯಗಳು | Shruti Haasan

27 ವರ್ಷಗಳ ಬಳಿಕ ನ್ಯಾಯ ದೇವರು ಶನಿಯ ಸಂಚಾರ: ಈ 3 ರಾಶಿಯವರಿಗೆ ಖುಲಾಯಿಸಿತು ಲಕ್​! Zodiac Signs

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…