16 C
Bangalore
Saturday, December 7, 2019

ಕಾಶ್ಮೀರಿಗಳೇ ಭಾರತದ ವಿರುದ್ಧ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಿ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ ಪಾಕ್​ ಪ್ರಧಾನಿ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಶ್ರೀನಗರ: ಭಾರತೀಯ ಸೇನೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆ ಆಗುತ್ತಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಗಂಭೀರ ಆರೋಪ ಮಾಡಿದ್ದಲ್ಲದೆ, ಭಾರತ ವಿರುದ್ಧ ಕಾಶ್ಮೀರಿಗಳನ್ನು ಎತ್ತಿಕಟ್ಟುವ ಪ್ರಚೋದಾನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಪಾಕ್​ ಆಕ್ರಮಿತ ಕಾಶ್ಮೀರದ ಮುಜಾಫರ್​ಬಾದ್​ನಲ್ಲಿ ಶುಕ್ರವಾರ ನಡೆದ ಐಕ್ಯತಾ ಸಮಾವೇಶದಲ್ಲಿ ಇಮ್ರಾನ್​ ಮಾತನಾಡಿದರು. ಪಾಕ್​ ಪ್ರಧಾನಿ ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಯಗೊಳಿಸುವ ಗುರಿಯನ್ನು ಹೊಂದಿದ್ದು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಅಧಿಕಾರವನ್ನು ರದ್ದುಪಡಿಸಿರುವುದರ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಾಶ್ಮೀರದಲ್ಲಿ ವಿಧಿಸಲಾಗಿರುವ ನಿರ್ಬಂಧಗಳನ್ನು ಉಲ್ಲೇಖಿಸಿ ವಿಶ್ವಕ್ಕೆ ಸಂದೇಶ ರವಾನಿಸುವ ಉದ್ದೇಶವನ್ನು ಹೊಂದಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಇಮ್ರಾನ್​, ವಿಶ್ವದ ಮುಂದೆ ಕಾಶ್ಮೀರ ರಾಯಭಾರಿಯಾಗಿ ವರ್ತಿಸುತ್ತೇನೆ ಎಂದು ತಿಳಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರಿಗಳಿಗೆ ನಿರಾಶೆಯಾಗಲು ಬಿಡುವುದಿಲ್ಲ ಎಂದಿದ್ದು, ಇದೇ ತಿಂಗಳ ಅಂತ್ಯದಲ್ಲಿ ಜಾಗತಿಕ ಸಂಘಟನೆಯನ್ನು ಉದ್ದೇಶಿಸಿ ಇಮ್ರಾನ್​ ಮಾತನಾಡಲಿದ್ದಾರೆ.

ಕಾಶ್ಮೀರ ವಿಚಾರವನ್ನು ಮಾನವೀಯ ಬಿಕ್ಕಟ್ಟು ಎಂದು ಕರೆದಿರುವ ಇಮ್ರಾನ್​, ಯುರೋಪಿಯನ್ ಯೂನಿಯನ್ ಮತ್ತು ಬ್ರಿಟಿಷ್ ಸಂಸತ್ತು ಕೂಡ ಕಾಶ್ಮೀರದ ವಿಷಯವನ್ನು ಕೈಗೆತ್ತಿಕೊಂಡಿವೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿರುವ ಇಮ್ರಾನ್​, ಭಾರತೀಯ ಸೇನೆಯಿಂದ ಕಾಶ್ಮೀರಿಗಳಿಗೆ ಎಷ್ಟು ಹಿಂಸೆಯಾಗಿದೆ ಎಂಬುದು ವಿಚಾರವಲ್ಲ. ಆದರೆ, ಅವರು ಮಾಡುವ ಯಾವುದೇ ಪ್ರಯತ್ನವು ಫಲ ನೀಡುವುದಿಲ್ಲ. ಮೋದಿ ಅವರು ಕಾಶ್ಮೀರಿಗಳನ್ನು ಉಗ್ರವಾದದ ಕಡೆ ನೂಕುತ್ತಿದ್ದಾರೆ. ಅಲ್ಲದೆ, ಹಿಂದುಗಳು ಮಾತ್ರ ಭಾರತದಲ್ಲಿ ವಾಸಿಸಬೇಕು ಎಂಬ ಆರ್​ಎಸ್​ಎಸ್ ಕಾರ್ಯಸೂಚಿಯನ್ನು ರೂಪಿಸುತ್ತಿದ್ದಾರೆ. ಒಂದು ವೇಳೆ ಭಾರತ ಯಾವುದೇ ಆಕ್ರಮಣಶೀಲತೆ ತೋರಿದರೆ, ನಾವು ಕೂಡ ಸಮರ್ಥ ಉತ್ತರ ನೀಡುತ್ತೇವೆ ಎಂದು ಕಿಡಿಕಾರಿದ್ದಾರೆ.

ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಇಮ್ರಾನ್​, ಕಾಶ್ಮೀರಿಗಳು ಭಾರತವನ್ನು ವಿರೋಧಿಸಬೇಕು. ಬಿಜೆಪಿ ಮತ್ತು ಆರ್​ಎಸ್​ಎಸ್​ ಆಡಳಿತದ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳಿ ಎಂದು ಪ್ರಚೋದಿಸಿದ್ದಾರೆ. ಮೋದಿ ಅವರು ಕಾಶ್ಮೀರಿಗಳ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿದ್ದಾರೆ. ನಾವು ಶಾಂತಿಯನ್ನು ಬಯಸುತ್ತಿದ್ದೇವೆ. ಭಾರತೀಯ ಸೇನೆಯ ಹಿಂಸೆಯಿಂದ ಕಾಶ್ಮೀರಿಗಳು ಆಯಾಸಗೊಂಡಿದ್ದಾರೆ. 20 ವರ್ಷದ ಕಾಶ್ಮೀರಿ ಯುವಕ ತನ್ನಷ್ಟಕ್ಕೆ ತಾನೇ ಶಸ್ತ್ರಾಸ್ತ್ರ ಮತ್ತು ಬಾಂಬ್​ಗಳನ್ನು ತೆಗೆದುಕೊಂಡು ಪುಲ್ವಾಮದಲ್ಲಿ ದಾಳಿ ಮಾಡಿದ. ಆದರೆ, ಭಾರತ ನಮ್ಮ ವಿರುದ್ಧ ಆರೋಪ ಮಾಡಿ, ನಮ್ಮ ಮೇಲೆ ಬಾಲಾಕೋಟ್​ ವೈಮಾನಿಕ ದಾಳಿ ಮಾಡಿತು. ನಾವು ಅಭಿನಂದನ್​​​ ವರ್ಧಮಾನ್​ರನ್ನು ಬಿಡುಗಡೆ ಮಾಡುತ್ತಿರಲಿಲ್ಲ. ಆದರೆ, ನಮಗೆ ಯುದ್ಧ ಬೇಕಿಲ್ಲ ಎಂಬ ಕಾರಣಕ್ಕೆ ಬಿಟ್ಟು ಕಳುಹಿಸಿದೆವು. ಆದರೆ, ಅಂತಾರಾಷ್ಟ್ರೀಯ ಒತ್ತಡದಿಂದ ಬಿಟ್ಟು ಕಳುಹಿಸದರು ಎಂದು ಮೋದಿ ತಮ್ಮ ದೇಶದ ಜನತೆಯ ಬಳಿ ಹೇಳಿಕೊಂಡಿದ್ದಾರೆ. ಆದರೆ, ಅದು ನಿಜವಲ್ಲ. ಪಾಕಿಸ್ತಾನ ಎಂದಿಗೂ ಸಾವಿಗೆ ಹೆದರುವುದಿಲ್ಲ ಎಂಬ ಮಾತುಗಳನ್ನು ಇಮ್ರಾನ್​ ಆಡಿದ್ದಾರೆ. (ಏಜೆನ್ಸೀಸ್​)

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...