18 C
Bangalore
Friday, December 6, 2019

ನಾನು ಹುಟ್ಟಿನಿಂದಲೇ ಆಶಾವಾದಿ ಎಂದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಇಸ್ಲಮಾಬಾದ್​: ನಾನು ಹುಟ್ಟಿನಿಂದಲೇ ಆಶಾವಾದಿ. ಅಲ್ಲದೆ, ಒಬ್ಬ ಕ್ರೀಡಾಪಟು ಯಾವಾಗಲೂ ಆಶಾವಾದಿಯಾಗಿರುತ್ತಾನೆ. ಆತ ಮೈದಾನಕ್ಕೆ ಹೆಜ್ಜೆಯಿಡುತ್ತಲೇ ಜಯ ಸಾಧಿಸುವ ಭರವಸೆಯನ್ನು ಹೊಂದಿರುತ್ತಾನೆ ಎಂದು ಹೇಳುವ ಮೂಲಕ ಪಾಕಿಸ್ತಾನ ನೂತನ ಪ್ರಧಾನಿ ಇಮ್ರಾನ್​ ಖಾನ್​ ಅಮೆರಿಕ ಜತೆ ಮತ್ತೆ ಸಂಬಂಧ ಗಟ್ಟಿಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಇಸ್ಲಮಾಬಾದ್​ನಲ್ಲಿ ಬುಧವಾರ ಅಮೆರಿಕದ ವಿದೇಶಾಂಗ ವ್ಯವಹಾರಗಳ ಮುಖ್ಯ ಸಲಹೆಗಾರ ಮೈಕ್ ಪೊಂಪಿಯೊ ಅವರನ್ನು ಭೇಟಿ ಮಾಡಿ ಇಮ್ರಾನ್​ ಮಾತನಾಡಿದರು. ಉಗ್ರರ ನಿಗ್ರಹದಲ್ಲಿ ಪಾಕ್​ ವಿಫಲವಾಗಿದೆ ಎಂದು ಅಮೆರಿಕ ತನ್ನ ನೆರವನ್ನು ತಡೆಯಿಡಿದಿರುವುದು ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಬಿರುಕು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಸಂಬಂಧ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇಮ್ರಾನ್​ ನಾನು ಆಶಾವಾದಿ ಎಂದು ಹೇಳಿಕೊಂಡಿದ್ದಾರೆ.

ಮೊದಲ ಬಾರಿಗೆ ಪಾಕ್​ಗೆ ಭೇಟಿ ನೀಡಿದ ಪೊಂಪಿಯೊ ಕೇವಲ ನಾಲ್ಕು ಗಂಟೆ ಕಾಲ ಮಾತ್ರ ಅಲ್ಲಿ ಉಳಿದಿದ್ದರು. ಅಲ್ಲಿಂದ ಭಾರತಕ್ಕೆ ಹೊರಡುವ ಮುನ್ನ ಮಾತನಾಡಿದ ಅವರು, ಮತ್ತೆ ಉತ್ತಮ ಸಂಬಂಧ ಮುಂದುವರಿಸಲು ಇದೊಂದು ಅಡಿಪಾಯವಾಗಿದೆ. ಒಟ್ಟಿಗೆ ಮುಂದುವರಿಯುವ ಭರವಸೆ ಇದೆ ಎಂದು ಹೇಳಿದರು.

ನಾವು ಇನ್ನು ಬಹಳ ದೂರ ಸಾಗಬೇಕಿದೆ. ಹೆಚ್ಚು ಹೆಚ್ಚು ಚರ್ಚೆಯನ್ನು ಮಾಡಬೇಕಿದೆ. ನಮ್ಮ ಜಂಟಿ ಬದ್ಧತೆಯನ್ನು ತಲುಪಲು ಕಾರ್ಯಪ್ರವೃತ್ತರಾಗಲು ಇದು ಸುಸಂದರ್ಭ. ನಾವು ಅನೇಕ ಬಾರಿ ಮಾತನಾಡಿದ್ದೇವೆ. ಹಲವು ಒಪ್ಪಂದವನ್ನು ಮಾಡಿಕೊಂಡಿದ್ದೇವೆ. ಆದರೆ, ಅವುಗಳನ್ನು ನಾವು ವಾಸ್ತವವಾಗಿ ಕಾರ್ಯಗತಗೊಳಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಹೊಸ ಸರ್ಕಾರದ ಬಗ್ಗೆ ನಾವು ಮಾತನಾಡಿದ್ದೇವೆ. ಆರ್ಥಿಕ, ಉದ್ಯಮ ಹಾಗೂ ವಾಣಿಜ್ಯ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತೆ ಗಟ್ಟಿಗೊಳಿಸಲು ಅವಕಾಶ ಇದೆ ಎಂದು ಹೇಳಿದ ಅವರು, ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸಲು ಉಭಯ ದೇಶಗಳು ಜತೆಯಾಗಿ ಕಾರ್ಯನಿರ್ವಹಿಸಬೇಕೆಂದರು. (ಏಜೆನ್ಸೀಸ್​)

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...