ಡೊನಾಲ್ಡ್ ಟ್ರಂಪ್ ಭೇಟಿಯಾದ ಪಾಕ್​ ಪ್ರಧಾನಿ ಶೆಹಬಾಜ್ ಷರೀಫ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್| Trump Meet

Untitled design (97)
Published on

Trump Meet: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಪಾಕ್ ಆರ್ಮಿ ಮುಖ್ಯಸ್ಥ ಅಸಿಮ್ ಮುನೀರ್ ಗುರುವಾರ(ಸೆ. 25)ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಓವಲ್ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪಾಕ್​ ನಾಯಕರ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಟ್ರಂಪ್, ಪಾಕ್​ ನಾಯಕರನ್ನು ಮಹಾನ್ ನಾಯಕರೆಂದು ಕರೆದಿದ್ದಾರೆ. ಪಾಕಿಸ್ತಾನ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥ ಇಬ್ಬರೂ ತುಂಬಾ ಒಳ್ಳೆಯ ವ್ಯಕ್ತಿಗಳು, ಒಬ್ಬರು ನನ್ನ ಭೇಟಿಯಾಗಿದ್ದಾರೆ. ಈಗ ಅವರು ನನ್ನ ಕೋಣೆಯಲ್ಲಿರಬಹುದು ಎಂದು ಹೇಳಿದ್ದರು.

ನಿನ್ನೆ ಸಾಯಂಕಾಲ 4.50ರ ಸುಮಾರಿಗೆ ಟ್ರಂಪ್ ಕಚೇರಿಗೆ ಶೆಹಬಾಜ್ ಮತ್ತು ಮುನೀರ್ ಆಗಮಿಸಿದ್ದು, ಈ ವೇಳೆ ಅಧಿಕಾರಿಗಳು ಅವರನ್ನು ಸ್ವಾಗತಿಸಿದ್ದಾರೆ. ಈ ವೇಳೆ ಟ್ರಂಪ್ ಕಚೇರಿಯಲ್ಲಿ ಕೆಲ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿ, ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್​ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ ನಂತರ ಎರಡು ದೇಶಗಳ ನಾಯಕರು ಭೇಟಿಯಾಗಿದ್ದಾರೆ.  ಅಮೆರಿಕಾ ಮತ್ತು ಪಾಕ್ ನಡುವೆ ವ್ಯಾಪಾರ ಒಪ್ಪಂದದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿನೋ ಸಹ ಹಾಜರಿದ್ದರು ಎಂದು ವರದಿಯಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net