More

    ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗೆ ಪಾಕ್​ ಪ್ರಚೋದನೆ

    ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸುವಂತೆ ಪಾಕಿಸ್ತಾನ ಪ್ರಚೋದನೆ ನೀಡುತ್ತಿದೆ ಎಂಬ ವಿಷಯ ಬಹಿರಂಗಗೊಂಡಿದೆ. ಜಮ್ಮು-ಕಾಶ್ಮೀರದ ಡಿಜಿಪಿ ದಿಲ್ಬಂಗ್ ಸಿಂಗ್ ಅವರೇ ಈ ವಿಷಯವನ್ನು ಹೇಳಿದ್ದಾರೆ.

    ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಮೂವರು ಲಷ್ಕರ್ ಇ ತೋಯ್ಬಾ (ಎಲ್​ಇಟಿ) ಉಗ್ರರನ್ನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ಮಾತನಾಡಿದ ಡಿಜಿಪಿ, ಜಮ್ಮು-ಕಾಶ್ಮೀರ ಪೊಲೀಸರು ನಿನ್ನೆ ದೊಡ್ಡ ಯಶಸ್ಸು ಕಂಡಿದ್ದಾರೆ. ಮೂವರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಬಗ್ಗೆ ಸುಳಿವು ಸಿಕ್ಕಿದ್ದರಿಂದ ಅವರನ್ನು ವಶಕ್ಕೆ ಪಡೆದಾಗ, ಅವರ ಬ್ಯಾಗ್​ಗಳಲ್ಲಿ ನಾಲ್ಕು ಗ್ರನೇಡ್​ಗಳು ಪತ್ತೆಯಾಗಿದ್ದವು. ಮಾತ್ರವಲ್ಲ ಎರಡು ಎಕೆ-57 ರೈಫಲ್ಸ್​, ಎರಡು ಪಿಸ್ತೂಲ್​ಗಳು ಕೂಡ ಸಿಕ್ಕಿದ್ದವು ಎಂದು ಹೇಳಿದ್ದಾರೆ.

    ಈ ಬಗ್ಗೆ ಮತ್ತಷ್ಟು ಮಾಹಿತಿ ನೀಡಿರುವ ಅವರು, ಜಮ್ಮು-ಕಾಶ್ಮೀರದಲ್ಲಿ ಶಾಂತಿಯನ್ನು ಕದಡಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಉಗ್ರರನ್ನು ನುಸುಳಿಸಲು ಯತ್ನಿಸುತ್ತಿರುವ ಪಾಕ್​, ಆಯುಧಗಳನ್ನು ತಲುಪಿಸಲು ಡ್ರೋನ್​ಗಳನ್ನೂ ಬಳಸುತ್ತಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಸಾಧ್ಯವಾದ ಎಲ್ಲ ರೀತಿಯಲ್ಲೂ ಉಗ್ರ ಚಟುವಟಿಕೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts