More

    ಪಾಕಿಸ್ತಾನದಲ್ಲಿ ಮಳೆಯಿಂದಾಗಿ 37 ಜನರು ಸಾವು; ಉತ್ತರ ಪಾಕ್ ಕಡೆಗೆ ಪ್ರಯಾಣಿಸದಂತೆ ಅಧಿಕಾರಿಗಳ ಸೂಚನೆ

    ಪಾಕಿಸ್ತಾನ: ಭಾರೀ ಮಳೆಯಿಂದಾಗಿ ಪಾಕಿಸ್ತಾನದ ಹಲವು ಪ್ರದೇಶಗಳಲ್ಲಿ  ಸಾಕಷ್ಟು ಸಮಸ್ಯೆ ಉಂಟಾಗಿದೆ. ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ಫೆಬ್ರವರಿ 29 ಮತ್ತು ಮಾರ್ಚ್ 3 ರ ನಡುವೆ ಪಾಕಿಸ್ತಾನದಲ್ಲಿ ವರುಣನ ಆರ್ಭಟಕ್ಕೆ ಸುಮಾರು 37 ಜನರು ಸಾವನ್ನಪ್ಪಿದ್ದಾರೆ.

    ಮಳೆಯಿಂದಾಗಿ ಹಲವೆಡೆ ಮನೆಗಳು ಕುಸಿದಿವೆ. ಭೂಕುಸಿತವೂ ಸಂಭವಿಸಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ವಾಯುವ್ಯ ಖೈಬರ್ ಪಖ್ತುಂಖ್ವಾ (ಕೆಪಿಕೆ) ಪ್ರಾಂತ್ಯದಲ್ಲಿ ಸಮಸ್ಯೆ ಇನ್ನು ಕೆಟ್ಟದಾಗಿದೆ. ಗುರುವಾರ ರಾತ್ರಿಯಿಂದ (ಫೆಬ್ರವರಿ 29) ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.

    ಕಳೆದ 48 ಗಂಟೆಗಳಲ್ಲಿ, ಬಜಾರ್, ಸ್ವಾತ್, ಲೋವರ್ ದಿರ್, ಮಲಕಾಂಡ್, ಖೈಬರ್, ಪೇಶಾವರ್, ಉತ್ತರ, ದಕ್ಷಿಣ ವಜೀರಿಸ್ತಾನ್ ಮತ್ತು ಲಕ್ಕಿ ಮಾರ್ವತ್ ಸೇರಿದಂತೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹತ್ತು ಜಿಲ್ಲೆಗಳಲ್ಲಿ ಧಾರಾಕಾರ ಮಳೆಗೆ 37 ಜನರು ಸಾವನ್ನಪ್ಪಿದ್ದಾರೆ. ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕರಾವಳಿ ನಗರವಾದ ಗ್ವಾದರ್‌ನಲ್ಲಿ ಪ್ರವಾಹದಲ್ಲಿ ಮುಳುಗಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ, ಸಿಕ್ಕಿಬಿದ್ದವರನ್ನು ರಕ್ಷಿಸಲು ದೋಣಿಗಳನ್ನು ಬಳಸಬೇಕಾಗಿದೆ.

    ಅಧಿಕಾರಿಗಳ ಪ್ರಕಾರ, ಕಳೆದ ಎರಡು ದಿನಗಳಲ್ಲಿ ಗ್ವಾದರ್‌ನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ, ನೂರಾರು ಜನರು ನಿರಾಶ್ರಿತರಾಗಿದ್ದಾರೆ. ಮನೆಗಳಿಗೆ ನುಗ್ಗಿದ ಪ್ರವಾಹದಿಂದಾಗಿ ಹತ್ತಾರು ಜನವಸತಿ ಮತ್ತು ವಾಣಿಜ್ಯ ಸಂಸ್ಥೆಗಳು ಕುಸಿದು ಬಿದ್ದಿದ್ದು, ರಸ್ತೆಗಳು ಕೆಟ್ಟದಾಗಿವೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲೂ ಸಾಕಷ್ಟು ಹಾನಿಯಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಇಲ್ಲಿ ಹಿಮಪಾತಕ್ಕೆ ಐವರು ಸಾವನ್ನಪ್ಪಿದ್ದಾರೆ. ಇದಲ್ಲದೇ ಹಿಮದಿಂದಾಗಿ ಹಲವು ರಸ್ತೆಗಳು ಬಂದ್ ಆಗಿವೆ.

    ಉತ್ತರ ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದ ವಕ್ತಾರ ಫೈಜುಲ್ಲಾ ಫರಾಕ್ ಪ್ರಕಾರ, ಪಾಕಿಸ್ತಾನದಿಂದ ಚೀನಾಕ್ಕೆ ಸಂಪರ್ಕ ಕಲ್ಪಿಸುವ ಕಾರಕೋರಂ ಹೆದ್ದಾರಿಯು ಮಳೆಯಿಂದ ಉಂಟಾದ ಭೂಕುಸಿತದಿಂದ ನಿರ್ಬಂಧಿಸಲ್ಪಟ್ಟಿದೆ. ಹವಾಮಾನ ವೈಪರೀತ್ಯದಿಂದಾಗಿ ಉತ್ತರ ಪಾಕಿಸ್ತಾನದ ಕಡೆಗೆ ಪ್ರಯಾಣಿಸದಂತೆ ಅಧಿಕಾರಿಗಳು ಪ್ರವಾಸಿಗರಿಗೆ ಸೂಚಿಸಿದ್ದಾರೆ. ಕಳೆದ ವಾರ ಸುರಿದ ಭಾರಿ ಮಳೆಗೆ ಈ ಭಾಗದಲ್ಲಿ ಹಲವು ಪ್ರವಾಸಿಗರು ಸಿಲುಕಿಕೊಂಡಿದ್ದರು.

    ದೆಹಲಿ-ಯುಪಿಯಲ್ಲಿ ಮಳೆಯಿಂದಾಗಿ ಯೂ ಟರ್ನ್ ತೆಗೆದುಕೊಂಡ ಚಳಿ; ವರುಣನ ಆರ್ಭಟಕ್ಕೆ ಪಾಕಿಸ್ತಾನದಲ್ಲಿ ಅಪಾರ ಹಾನಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts