18.1 C
Bangalore
Saturday, December 7, 2019

VIDEO| ಅಂತಾರಾಷ್ಟ್ರೀಯ ಶೃಂಗದಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕ್​ಗೆ ಮತ್ತೊಮ್ಮೆ ಮುಖಭಂಗ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಮಾಲೆ: ಜಮ್ಮು ಮತ್ತು ಕಾಶ್ಮೀರ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ದೂರು ನೀಡಿ ಮುಖಭಂಗ ಅನುಭವಿಸಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮುಖಭಂಗವಾಗಿದೆ.

ಮಾಲ್ಡೀವ್ಸ್​ನಲ್ಲಿ ಆಯೋಜನೆಗೊಂಡಿರುವ 4ನೇ ದಕ್ಷಿಣ ಏಷ್ಯಾ ಸ್ಪೀಕರ್​ಗಳ ಶೃಂಗಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಷಯ ಪಸ್ತಾಪಿಸಲು ಪ್ರಯತ್ನಿಸಿದ ಪಾಕಿಸ್ತಾನ ಮತ್ತೊಮ್ಮೆ ಮುಖಭಂಗಕ್ಕೆ ಒಳಗಾಗಿದೆ. ಪಾಕಿಸ್ತಾನದ ಪ್ರಯತ್ನಕ್ಕೆ ಭಾರತ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರತಿನಿಧಿ ಕಾಶ್ಮೀರ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ್ದ ವಿಷಯವನ್ನು ರೆಕಾರ್ಡ್​ನಿಂದ ತೆಗೆದುಹಾಕುವಂತೆ ಮಾಲ್ಡೀವ್ಸ್​ನ ಸ್ಪೀಕರ್​ ನಷೀದ್​ ಸೂಚಿಸಿದರು. ಅಲ್ಲದೆ, ಪಾಕಿಸ್ತಾನಿ ಪ್ರತಿನಿಧಿಗಳು ಶೃಂಗಸಭೆಯ ಕಾರ್ಯಸೂಚಿಯನ್ನು ಪಾಲಿಸಬೇಕು. ಈ ವೇದಿಕೆಯನ್ನು ರಾಜಕೀಯಗೊಳಿಸಬಾರದು ಎಂದು ತಾಕೀತು ಮಾಡಿದರು. ಈ ಮೂಲಕ ಮತ್ತೊಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಾಶ್ಮೀರದ ವಿಷಯವಾಗಿ ಭಾರತದ ವಿರುದ್ಧ ಅಭಿಪ್ರಾಯ ಮೂಡಿಸುವ ಪಾಕ್​ನ ಪ್ರಯತ್ನಕ್ಕೆ ಸೋಲುಂಟಾಯಿತು.

ಮಾಲ್ಡೀವ್ಸ್​ನ ಮಾಲೆಯಲ್ಲಿ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವ ಕುರಿತು 4ನೇ ದಕ್ಷಿಣ ಏಷ್ಯಾ ಸ್ಪೀಕರ್​ಗಳ ಶೃಂಗಸಭೆಯನ್ನು ಆಯೋಜಿಸಲಾಗಿದೆ. ಈ ಶೃಂಗದಲ್ಲಿ ಭಾರತದ ಪ್ರತಿನಿಧಿಗಳಾಗಿ ಲೋಕಸಭೆಯ ಸ್ಪೀಕರ್​ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಉಪಸಭಾಪತಿ ಹರಿವಂಶ್​ ನಾರಾಯಣ್​ ಸಿಂಗ್​ ಭಾಗವಹಿಸಿದ್ದಾರೆ.

ಭಾನುವಾರದ ಸಭೆಯಲ್ಲಿ ಪಾಕಿಸ್ತಾನದ ಪ್ರತಿನಿಧಿ ಖಾಸಿಮ್​ ಸೂರಿ ಮಾತನಾಡುತ್ತಾ ನಾವು ಕಾಶ್ಮೀರಿ ಜನರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಂತೆ ರಾಜ್ಯಸಭೆಯ ಉಪಸಭಾಪತಿ ಹರಿವಂಶ್​ ನಾರಾಯಣ್​ ಸಿಂಗ್​ ಪಾಕ್​ ಪ್ರತಿನಿಧಿಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಕ್ರಿಯಾಲೋಪ ಎತ್ತಿದರು. ‘ ಕಾಶ್ಮೀರ ವಿಷಯ ಭಾರತದ ಆಂತರಿಕ ವಿಷಯವಾಗಿದೆ. ಆ ವಿಷಯವನ್ನು ಈ ವೇದಿಕೆಯಲ್ಲಿ ಪ್ರಸ್ತಾಪಿಸುವಂತಿಲ್ಲ. ಶೃಂಗ ಸಭೆಯ ಆಶಯಕ್ಕೆ ವಿರುದ್ಧವಾಗಿರುವ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಈ ವೇದಿಕೆಯನ್ನು ರಾಜಕೀಯಗೊಳಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ತಿಳಿಸಿದರು.

ಭಾರತದೊಳಗೆ ಉಗ್ರರನ್ನು ಕಳುಹಿಸುವುದನ್ನು ಪಾಕಿಸ್ತಾನ ನಿಲ್ಲಿಸಬೇಕು. ಇದರ ಬದಲು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವತ್ತ ಗಮನ ಹರಿಸಬೇಕು. ಈ ವೇದಿಕೆಯಲ್ಲಿ ಸುಸ್ಥಿರ ಅಭಿವೃದ್ಧಿಯ ಗುರಿಗಳ ಕುರಿತು ಮಾತ್ರ ಚರ್ಚೆ ನಡೆಯಬೇಕು. ಪಾಕಿಸ್ತಾನದ ಹೇಳಿಕೆಗಳನ್ನು ಕಡತದಿಂದ ತೆಗೆಯಬೇಕು ಎಂದು ನಾರಾಯಣ ಸಿಂಗ್​ ಆಗ್ರಹಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಪಾಕಿಸ್ತಾನದ ಸಂಸದೆ ಕುರಾತುಲೈನ್ ಮರ್ರಿ ಭಾರತದ ವಿರುದ್ಧ ಆಕ್ರೋಶಭರಿತವಾಗಿ ಹೇಳಿಕೆ ನೀಡಿದರು. ಜತೆಗೆ ಈ ವೇದಿಕೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಬಹುದಾಗಿದೆ. ಮಹಿಳೆಯರು, ಯುವಜನರು ಮತ್ತು ಪರಿಸರ ಕುರಿತಾದ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಮಾನವಹಕ್ಕುಗಳ ಹೊರತಾಗಿ ಸಾಧಿಸಲು ಸಾಧ್ಯವಿಲ್ಲ. ಕಾಶ್ಮೀರದಲ್ಲಿ ಜನರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದರು. ಪಾಕ್​ ಸಂಸದೆಯ ಹೇಳಿಕೆಯನ್ನು ನಾರಾಯಣ ಸಿಂಗ್​ ತೀವ್ರವಾಗಿ ವಿರೋಧಿಸಿದರು. ಈ ವೇಳೆ ಉಭಯ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು.

ಈ ವೇಳೆ ಮಧ್ಯೆ ಪ್ರವೇಶಿಸಿದ ಮಾಲ್ಡೀವ್ಸ್​ನ ಸ್ಪೀಕರ್​ ನಾಶೀದ್​ ಪಾಕಿಸ್ತಾನಿ ಪ್ರತಿನಿಧಿಗಳು ಶೃಂಗಸಭೆಯ ಅಜೆಂಡಾ ಕುರಿತು ಮಾತ್ರ ಮಾತನಾಡಬೇಕು, ಈ ವೇದಿಕೆಯನ್ನು ರಾಜಕೀಯಗೊಳಿಸಬಾರದು ಎಂದು ತಿಳಿಸಿದರು. (ಏಜೆನ್ಸಿಸ್​)

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...