

India: ಆಪರೇಷನ್ ಸಿಂಧೂರ ವಿರುದ್ಧ ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ನಡೆಸಿದ ಕ್ಷಪಣಿ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿ, ಲಾಹೋರ್ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ಅನ್ನು ಧ್ವಂಸಗೊಳಿಸಿದೆ.
ಪಹಲ್ಲಾಮ್ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಉಗ್ರರ ನೆಲೆಯ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ಮಾಡಿತ್ತು. ಮಂಗಳವಾರ (ಮೇ. 6)ತಡರಾತ್ರಿ ನಡೆದ ಕ್ಷಿಪಣಿ ದಾಳಿಯ ನಂತರ ಪಾಕಿಸ್ತಾನವು ಭಾರತದ ಮೇಲೆ ದಾಳಿ ನಡೆಸಲು ಪ್ರಯತ್ನ ಪಟ್ಟಿದೆ ಆದರೆ ಇದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ಹೈ ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ನಾಶಮಾಡಿದೆ. ಈ ಕುರಿತು ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು ದಾಳಿಯನ್ನು ಖಚಿತಪಡಿಸಿದೆ.
ಪಾಕಿಸ್ತಾನ ಚೀನಾದಿಂದ HQ-9 ಏರ್ ಡಿಫೆನ್ಸ್ ಸಿಸ್ಟಮ್ ಪಡೆದಿತ್ತು ಈಗ ಈ ವ್ಯವಸ್ಥೆಯನ್ನು ಭಾರತ ಸಂಪೂರ್ಣ ನಾಶ ಮಾಡಿದೆ. ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡುವ ಮೂಲಕ ತಡೆಗಟ್ಟಿದೆ. ಈ ದಾಳಿಯನ್ನು ಪಾಕಿಸ್ತಾನ ಸಹ ಖಚಿತಪಡಿಸಿದ್ದು, ದಾಳಿಯಲ್ಲಿ ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.
ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರಅನ್ನು ಪ್ರಾರಂಭಿಸಿ , ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿ ಪಾಕಿಸ್ತಾನದ 80ಕ್ಕೂ ಹೆಚ್ಚು ಉಗ್ರರನ್ನು ಮಟ್ಟ ಹಾಕಿದೆ. (ಏಜೆನ್ಸೀಸ್)