

ನವದೆಹಲಿ: ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿರುವುದು ಬೆಳಕಿಗೆ ಬಂದಿದ್ದು, ಜಮ್ಮು ಕಾಶ್ಮೀರದ ಗಡಿ ಪ್ರದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣಗೊಂಡಿದೆ. ದಾಳಿಯ ಕುರಿತು ಗಡಿ ಭದ್ರತಾ ಪಡೆ (ಬಿಎಸ್ಎಫ್) ಖಚಿತ ಪಡಿಸಿದೆ.
ಆರ್ಎಸ್ ಪುರ ಸೆಕ್ಟರ್ನ ಅಂತಾರಾಷ್ಟ್ರೀಯ ಗಡಿಭಾಗದ ಕದನವಿರಾಮ ಘೋಷಿತ ಪ್ರದೇಶದಲ್ಲಿ ಅದನ್ನು ಉಲ್ಲಂಘಿಸಿ ಪಾಕಿಸ್ತಾನ ಈ ದಾಳಿ ನಡೆಸಿದೆ. ಇಂದು ರಾತ್ರಿ 8 ಗಂಟೆ ಸುಮಾರಿಗೆ ಈ ಗುಂಡಿನ ದಾಳಿ ನಡೆದಿದೆ.
ಇಂದು ರಾತ್ರಿ 8 ಗಂಟೆ ಸುಮಾರಿಗೆ ಅರ್ನಿಯಾ ಪ್ರದೇಶದಲ್ಲಿನ ಬಿಎಸ್ಎಫ್ ಪೋಸ್ಟ್ಗಳ ಮೇಲೆ ಪಾಕ್ ರೇಂಜರ್ಗಳು ಅಪ್ರಚೋದಿತ ಗುಂಡಿನ ದಾಳಿಯನ್ನು ಪ್ರಾರಂಭಿಸಿದರು, ಇದಕ್ಕೆ ಬಿಎಸ್ಎಫ್ ಪಡೆಗಳು ಸೂಕ್ತವಾಗಿ ಪ್ರತೀಕಾರ ತೀರಿಸಿಕೊಂಡಿವೆ. ಇನ್ನೂ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಬಿಎಸ್ಎಫ್ ಪಿಆರ್ಒ ತಿಳಿಸಿದ್ದಾರೆ.