

Indian Army: ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನ ಮಂಗಳವಾರ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಪೂಂಚ್ ವಲಯದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಮಂಗಳವಾರ ವರದಿಯಾಗಿದೆ.
ಪೂಂಚ್‌ನ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆಯು ಪ್ರತಿದಾಳಿ ನಡೆಸಿದ್ದು, 15 ನಿಮಿಷಗಳ ಕಾಲ ಗುಂಡಿನ ಚಕಮಕಿ ಮುಂದುವರೆದಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿ ಉಲ್ಲೇಖಿಸಿದೆ.
ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಮೇ.7 ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಇದು ಮೊದಲ ಕದನ ವಿರಾಮ ಉಲ್ಲಂಘನೆಯಾಗಿದೆ.(ಏಜೆನ್ಸೀಸ್)