ಬಂದರು ಗುರಿಯಾಗಿಸಿ ಭಯೋತ್ಪಾದಕರಿಂದ ಗುಂಡಿನ ದಾಳಿ; 7 ಮಂದಿ ಕಾರ್ಮಿಕರು ಸಾವು, ಓರ್ವ ಗಂಭೀರ

Terrorist
Published on

ಲಾಹೋರ್​: ಫಿಶ್​ ಹಾರ್ಬರ್​ ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 7 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಗ್ವಾದರ್​ನಲ್ಲಿ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗ್ವಾದರ್ ಸ್ಟೇಷನ್ ಹೌಸ್ ಅಧಿಕಾರಿ (SHO) ಮೊಹ್ಸಿನ್ ಅಲಿ, ಸುರಬಂದರ್ ಪ್ರದೇಶದ ಫಿಶ್ ಹಾರ್ಬರ್ ಜೆಟ್ಟಿ ಬಳಿ ಘಟನೆ ನಡೆದಿದ್ದು, 7 ಮಂದಿ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಸುರಬಂದರ್​ನ ಕಟ್ಟಿಂಗ್​ ಶಾಪ್​ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ಬಿಡಲಾಗುವುದಿಲ್ಲ. ಸರ್ಕಾರಕ್ಕೆ ವರದಿ ಸಲ್ಲಿಸಿ ಗುಂಡಿನ ದಾಳಿಯಲ್ಲಿ ಮರತಪಟ್ಟವರ ಕುಟುಂಬಗಳಿಗೆ ಅಗತ್ಯ ನೆರವು ಕೊಡಿಸಲಾಗುವುದು ಎಂದು ಗ್ವಾದರ್ ಸ್ಟೇಷನ್ ಹೌಸ್ ಅಧಿಕಾರಿ (SHO) ಮೊಹ್ಸಿನ್ ಅಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net