

ಲಾಹೋರ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರನ್ನು ಅರೆಸೇನಾ ಪಡೆಗಳು ವಶಕ್ಕೆ ಪಡೆದಿದ್ದವು.
ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ನ ಕೋರ್ಟ್ ಆವರಣದಲ್ಲಿ ವಶಕ್ಕೆ ಙಡೆಯಲಾಗಿತ್ತು ಮತ್ತು ದೇಶಾದ್ಯಂತ ಅವರ ಬಂಧನದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.
ಇಮ್ರಾನ್ ಖಾನ್ ಬಂಧನ ಪಿಟಿಐ ಪಕ್ಷವು ಪಾಕಿಸ್ತಾನದ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಪೀಠವು ವಾದ-ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿದ ನ್ಯಾಯಾಲಯವು ತನ್ನ ಅಭಿಪ್ರಾಯವನ್ನು ತಿಳಿಸಿದೆ.
ಇಮ್ರಾನ್ ಖಾನ್ ಅವರ ಬಂಧನವು ಕಾನೂನು ಬಾಹಿರವಾಗಿದ್ದು ತಕ್ಷಣವೇ ಅವರನನ್ಉ ಬಿಡುಗಡೆ ಮಾಡುವಂತೆ ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ಸೂಚಿಸಿದೆ.
ಮಂಗಳವಾರ ಇಮ್ರಾನ್ ಖಾನ್ ಬಂಧನದ ನಂತರ ಪಾಕಿಸ್ತಾನದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಇಲ್ಲಿಯವರೆಗೂ ಅನೇಕ ಸರ್ಕಾರಿ ಹಾಗು ಖಾಸಗಿ ಸ್ವತ್ತುಗಳಿಗೆ ಹಾನಿಯಾಗಿದೆ.
ಪಾಕಿಸ್ತಾನದ ಹಲವೆಡೆ ಇಮ್ರಾನ್ ಖಾನ್ ಬೆಂಬಲಿಗರು ಕಲ್ಲುತೂರಾಟ ಹಾಗೂ ವಾಹನಗಿಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.