

ನವದೆಹಲಿ: ನವಂಬರ್ 05ರಂದು ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಎದುರಾಳಿಗಳ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ವಿಶ್ವದಲ್ಲಿರುವ ಗಣ್ಯ ನಾಯಕರೆಲ್ಲಾ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರುತ್ತಿರುವಗ ನಡುವೆಯೇ ಪಾಕಿಸ್ತಾನದ ಯುವತಿಯೊಬ್ಬಳು ನೀಡಿರುವ ಹೇಳಿಕೆ ಸಖತ್ ವೈರಲ್ (Viral Statement) ಆಗುತ್ತಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವರಾದ ಮೆಲಾನಿಯಾ ಎಂಬ ಯುವತಿಯೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತನ್ನ ತಂದೆ ಎಂದು ಹೇಳಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ (Video Viral) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಯುವತಿ ಮೆಲಾನಿಯಾ (Melania), ನಾನು ಮುಸ್ಲಿಂ ಮತ್ತು ಪಂಜಾಬ್ ಪ್ರಾಂತ್ಯಕ್ಕೆ ಸೇರಿದವಳು. ನನ್ನ ತಂದೆ ಟ್ರಂಪ್ (Donald Trump) ಎಂದು ಹೇಳಿರುವ ಯುವತಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳದ ಕಾರಣ ನನ್ನ ತಾಯಿ ನನ್ನನ್ನು ಪಾಕಿಸ್ತಾನಕ್ಕೆ ಕರೆದುಕೊಂಡು ಬಂದರು ಎಂದು ಯುವತಿ ಮೆಲಾನಿಯಾ ಹೇಳಿದ್ದು, ಈ ವಿಡಿಯೋ ಹೊಸ ಚರ್ಚೆಯನ್ನ ಹುಟ್ಟುಹಾಕಿದೆ. ಡೊನಾಲ್ಡ್ ಟ್ರಂಪ್ (Donald Trump) ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾದ ಬಳಿಕ ಈ ವಿಡಿಯೋ ಮುನ್ನೆಲೆಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ (Video Viral) ಆಗಿದೆ.
ಇತ್ತ ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ಇದೆಲ್ಲಾ ಪಾಕಿಸ್ತಾನದಲ್ಲಿ ಮಾತ್ರ ಕಂಡು ಬರಲು ಸಾಧ್ಯ, ಯಾರೋ ಹಲವಾರು ಸೋಪ್ ಒಪೆರಾಗಳನ್ನು ವೀಕ್ಷಿಸುತ್ತಿರುವಂತೆ ತೋರುತ್ತಿದೆ ಎಂದು ಕಮೆಂಟ್ ಮಾಡಿ ಯುವತಿಯ ಹೇಳಿಕೆಯನ್ನು ಟೀಕಿಸಿದ್ದಾರೆ. MeghUpdates ಎಂಬ ಟ್ವಿಟರ್ ಖಾತೆಯಲ್ಲಿ (Twitter Page) ಈ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ಈವರೆಗೂ ಒಂದೂವರೆ ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ.