ಪಾಕಿಸ್ತಾನದ ಸೇನಾ ವಾಹನದ ಮೇಲೆ ಪಾಕ್​​​ ಉಗ್ರರ ಭೀಕರ ದಾಳಿ: 12 ಸೈನಿಕರು ಛಿದ್ರ ಛಿದ್ರ| Pakistan Soldiers

Pakistan Soldiers
Published on

Pakistan Soldiers: ಬಿಎಲ್‌ಎ ಪಡೆ ಪಾಕಿಸ್ತಾನಿ ಸೇನಾ ವಾಹನದ ಮೇಲೆ ದಾಳಿ ಮಾಡಿದ ಪರಿಣಾಮ 12 ಸೈನಿಕರು ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಕಚ್ಚಿ ಜಿಲ್ಲೆಯ ಮಾಚ್​​​ನಲ್ಲಿ ನಡೆದಿದೆ.

ಬಲೂಚಿಸ್ತಾನ್ ಲಿಬರೇಶನ್ ಆರ್ಮಿಗೆ ಸೇರಿದ ಭಯೋತ್ಪಾದಕರು ಕಚ್ಚಿ ಜಿಲ್ಲೆಯ ಮಾಚ್ ಪ್ರದೇಶದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಬಾಂಬ್​​ ದಾಳಿ ನಡೆಸಿದೆ ಎಂದು ಪಾಕಿಸ್ತಾನ ಸೇನೆಯ  ತಿಳಿಸಿದೆ.

ಪಾಕ್ ಸೈನಿಕರು ಮಿಲಿಟರಿ ಕಾರ್ಯಾಚರಣೆಗೆ ಹೋಗುತ್ತಿರುವಾಗ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಗೆ ಸೇರಿದ ಭಯೋತ್ಪಾದಕರು ಕಚ್ಚಿ ಜಿಲ್ಲೆಯ ಮಾಚ್ ಪ್ರದೇಶದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ದಾಳಿ ಮೇಲೆ ಭೀಕರ ದಾಳಿ ಮಾಡಿ, ರಿಮೋಟ್ ಕಂಟ್ರೋಲ್ಡ್ ಐಇಡಿಯೊಂದಿಗೆ ಬೃಹತ್ ಸ್ಫೋಟ ನಡೆಸಿದೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಬಲೂಚ್ ಲಿಬರೇಷನ್ ಆರ್ಮಿಯ ಸದಸ್ಯರ ಪ್ಲಾನ್ ಮಾಡಿ ನಂತರ ವಾಹನ ಸ್ಫೋಟಗೊಳ್ಳುವ ದೃಶ್ಯ ಇದೆ. ಬ್ಲಾಸ್ಟ್ ಆದ ಹೊಡೆತಕ್ಕೆ ಪಾಕ್ ಸೈನಿಕರು ಛಿದ್ರ ಛಿದ್ರವಾಗಿ ನೆಲಕ್ಕೆ ಬಿದ್ದಿದ್ದಾರೆ.

ಈ ಸ್ಫೋಟದಲ್ಲಿ ಸೇನಾ ವಾಹನದಲ್ಲಿದ್ದ 12 ಸೈನಿಕರು ಸಾವನ್ನಪ್ಪಿದ್ದಾರೆ, ಅವರಲ್ಲಿ ವಿಶೇಷ ಕಾರ್ಯಾಚರಣೆ ಕಮಾಂಡರ್ ತಾರಿಕ್ ಇಮ್ರಾನ್ ಮತ್ತು ಸುಬೇದಾರ್ ಉಮರ್ ಫಾರೂಕ್ ಸೇರಿದ್ದಾರೆ ಎಂದು ಪಾಕ್​​ ತಿಳಿಸಿದೆ. ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಬಿಎಲ್‌ಎ ಈ ಹಿಂದೆ ಇಂತಹ ಅನೇಕ ದಾಳಿಗಳನ್ನು ನಡೆಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net